ಬ್ಯಾಟರಿ ಚಾಲಿತ ವಾಹನದಲ್ಲಿ ಹಂಪಿ ವೀಕ್ಷಿಸಿ

ಬಳ್ಳಾರಿ, ಸೆಪ್ಟೆಂಬರ್ 01: ಕೋವಿಡ್ ಲಾಕ್ ಡೌನ್ ತೆರವುಗೊಳಿಸಿದ ಬಳಿಕ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಣೆ ಮಾಡಿರುವ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಂಪಿ ವಿಶ್ವಪರಂಪರೆ ಅಭಿವೃದ್ಧಿ ಪ್ರಾಧಿಕಾರ (ಹವಾಮಾ) ಪ್ರವಾಸಿಗರಿಗೆ ಅನುಕೂಲವಾಗಲು ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ಬ್ಯಾಟರಿ ಚಾಲಿತ ವಾಹನಗಳು ಸಂಚಾರವನ್ನು ಆರಂಭಿಸಿವೆ.

ಗೆಜ್ಜಲ ಮಂಟಪದಿಂದ ಬ್ಯಾಟರಿ ಚಾಲಿತ ವಾಹನ ಸಂಚಾರವನ್ನು ಆರಂಭ ಮಾಡಲಾಗಿದೆ. ಪ್ರವಾಸಿಗರು ವಾಹನಗಳಲ್ಲಿ ಕುಳಿತು ಹಂಪಿಯ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಬಹುದಾಗಿದೆ.

Battery Car Facility Open For Tourists At Hampi

"ಪ್ರವಾಸಿಗರ ಅನುಕೂಲಕ್ಕಾಗಿ ಬ್ಯಾಟರಿ ಚಾಲಿತ ವಾಹನಗಳ ವ್ಯವಸ್ಥೆಗಳನ್ನು ಮಾಡಲಾಗಿದೆ" ಎಂದು ಹಂಪಿ ವಿಶ್ವಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ. ಎನ್. ಲೋಕೇಶ್ ಹೇಳಿದ್ದಾರೆ.

ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ಮಾರಕಗಳ ಬಳಿ ಶುಚಿತ್ವ ಕಾಪಾಡುವುದು ಸೇರಿದಂತೆ ಇತರ ವಿಷಯಗಳ ಕುರಿತು ಹವಾಮಾ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ.

ಸೋಮವಾರ ಬಳ್ಳಾರಿಯಲ್ಲಿ 365 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,230ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5107 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+