ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧ: ಬಳ್ಳಾರಿ ಅಭ್ಯರ್ಥಿ ದೇವೇಂದ್ರಪ್ಪ

|
Google Oneindia Kannada News

ಬಳ್ಳಾರಿ ಮಾರ್ಚ್ 28: ಬಳ್ಳಾರಿ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಬದ್ದನಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಬಳ್ಳಾರಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರ ಮತಯಾಚಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ಗದ್ದಿಗೇರಿ, ಮೇಲಗೇರಿ ಹಂಪಸಾಗರ ಸೇರದಂತೆ ಹಲವಾರು ಗ್ರಾಮಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಇಂದು ಭೇಟಿ ನೀಡಿ ಮತಯಾಚಿಸಿದರು. ಏ-ಸ್ಯಾಟ್, ಸರ್ಜಿಕಲ್ ಸ್ಟ್ರೈಕ್ ಸೇರಿದಂತೆ ಹಲವಾರು ದಿಟ್ಟ ನಿರ್ಧಾರಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ದಿಯಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂಬುದನ್ನು ಸಾಬಿತು ಪಡಿಸಿದ್ದಾರೆ. ಇಂಥ ಪ್ರಾಮಾಣೀಕ, ದೇಶದ ಬಗ್ಗೆ ಕಾಳಜಿಯನ್ನು ಹೊಂದಿರುವ ಪ್ರಧಾನಿಗಳ ಕೈಬಲಪಡಿಸಬೇಕಾಗಿದೆ ಎಂದರು.

Bellary Lok Sabha constituency BJP Candidate Campaign

ಬಳ್ಳಾರಿ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿ ನನ್ನ ಮೊದಲ ಗುರಿಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಒಂದು ಅವಕಾಶ ನೀಡಿದಲ್ಲಿ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಮಾಜಿ ವಿಧಾನಪರಿಷತ್ ಸದಸ್ಯರಾದ ಮೃತ್ಯುಂಜಯ ಜಿನಗ ಮಾತನಾಡಿ, ಸರಳ ಹಾಗೂ ಸಜ್ಜನ ಅಭ್ಯರ್ಥಿಯಾಗಿರುವ ದೇವೇಂದ್ರಪ್ಪ ಅವರು ಕ್ಷೇತ್ರದ ಅಭಿವೃದ್ದಿಗೆ ತಮ್ಮದೇ ಆದ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಭಾರತೀಯ ಜನತಾ ಪಕ್ಷ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತಿದೆ. ಈ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅನುಷ್ಠಾನಗೊಳಿಸಲು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತ ನೀಡಿ ಗೆಲ್ಲಿಸಬೇಕೆಂದು ವಿನಂತಿಸಿಕೊಳ್ಳುವುದಾಗಿ ಹೇಳಿದರು.

Bellary Lok Sabha constituency BJP Candidate Campaign

ಈ ಸಂಧರ್ಭದಲ್ಲಿ ಮಾಜಿ ಶಾಸಕ ಚಂದ್ರಾನಾಯ್ಕ್, ರೈತ ಮೋರ್ಚಾ ಉಪಾಧ್ಯಕ್ಷರಾದ ಎಸ್ ಗುರುಲಿಂಗನ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮಲಿಂಗಪ್ಪ ಮತ್ತು ತಿಮ್ಮಾರೆಡ್ಡಿ, ಗ್ರಾಮಾಂತರ ಕ್ಷೇತ್ರದ ಮುಖಂಡರಾದ ಓಬಳೇಶ್, ಮಂಡಲ ಅಧ್ಯಕ್ಷರಾದ ಚಡೇಗೌಡ, ಮಂಡಲು ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್, ಗ್ರಾಮಾಂತರ ಕ್ಷೇತ್ರದ ಬಿ.ಎ.ಎ-1 ಶ್ರೀನಿವಾಸ್ ಹಾಗೂ ಪಕ್ಷದ ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

English summary
Bellary Lok Sabha constituency BJP Candidate Y Devendrappa conducted election campaign today at Hoovina Hadagali assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X