Get Updates
Get notified of breaking news, exclusive insights, and must-see stories!

ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳಿಗೆ ಗೌರವ ಡಾಕ್ಟರೇಟ್

ಬಳ್ಳಾರಿ, ಏಪ್ರಿಲ್ 27 : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ ಏಪ್ರಿಲ್ 28ರಂದು ನಡೆಯಲಿದ್ದು, ಈ ವರ್ಷ ಬಾಳೆ ಹೊನ್ನೂರಿನ ಪೀಠದ ಜಗದ್ಗುರು ಪ್ರಸನ್ನ ರೇಣುಕಾ ವೀರಸೋಮೇಶ್ವರ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ ಎಂ ಎಸ್ ಸುಭಾಷ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವವು ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಲಿದೆ.

Bellary university to confer honorary doctorates to Rambhapuri Shree

ಈ ವರ್ಷ 5 ಜನರಿಗೆ ಪಿ ಹೆಚ್ ಡಿ ಪ್ರದಾನ, 30 ಜನರಿಗೆ ಚಿನ್ನದ ಪದಕ, ರ್ಯಾಂಕ್ ಪಡೆದ 163 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ ಎಂದರು.

ಕುಲಾಧಿಪತಿಗಳಾದ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿಸಲಿದ್ದು ನವದೆಹಲಿಯ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿಕಟಪೂರ್ವ ಅಧ್ಯಕ್ಷ ಪ್ರೊ ವೇದ ಪ್ರಕಾಶ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಹಾಗೂ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರೊ|| ಸುಭಾಷ್ ಹೇಳಿದರು.

ಗೌರವ ಡಾಕ್ಟರೇಟ್ ಗೆ 18 ಜನರಿಂದ ಅರ್ಜಿಗಳ ಪೈಕಿ 3 ಜನರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಇವರಲ್ಲಿ ರಂಭಾಪುರಿ ಶ್ರೀ ಅವರು ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+