ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ, ನಾಲ್ವರು ಆಸ್ಪತ್ರೆಗೆ ದಾಖಲು

ಬಳ್ಳಾರಿ, ಅಕ್ಟೋಬರ್‌, 16; ಭಾರತ್ ಜೋಡೋ ಯಾತ್ರೆ ವೇಳೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.ಇದರ ಪರಿಣಾಮ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ನಾಲ್ವರಿಗೆ ವಿದ್ಯುತ್ ಶಾಕ್‌ ಆಗಿದ್ದು, ಅವರನ್ನು ತಕ್ಷಣ ಮೋಕಾ ಆಸ್ಪತ್ರೆಗೆ ಶಾಸಕ ನಾಗೇಂದ್ರ ಅವರು ದಾಖಲಿಸಿದ್ದಾರೆ. ವಿದ್ಯುತ್‌ ಶಾಕ್‌ನಿಂದ ಗಾಯಗೊಂಡವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಭಾರಿ ಪ್ರಮಾಣದ ಅವಘಡ ತಪ್ಪಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಭೇಟಿ ಆದ ರಾಹುಲ್‌ ಗಾಂಧಿ, ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

ಪಾದಯಾತ್ರೆ ವೇಳೆ ಅಗ್ನಿ ಅವಘಡ

ಮೋಕಾ ಸರ್ಕಾರಿ ಆಸ್ಪತ್ರೆಗೆ ರಾಹುಲ್ ಗಾಂಧಿ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯವನ್ನು ವಿಚಾರಿಸಿದ್ದಾರೆ. ಹಾಗೂ ವಿದ್ಯುತ್‌ ಅವಘಡದಿಂದ ಗಾಯಗೊಂಡಿದ್ದ ಗ್ರಾಮ ಪಂಚಾಯಿತಿ ಅದ್ಯಕ್ಷ ರಾಮಣ್ಣ ಸೇರಿದಂತೆ ಮೂವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುವ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ.

ರಾಹುಲ್ ಗಾಂಧಿ ಸನಿಹದಲ್ಲೇ ವಿದ್ಯುತ್ ಅವಘಡ ಸಂಭಿಸಿದ್ದು, ಸದ್ಯ ಭಾರಿ ಅನಾಹುತ ತಪ್ಪಿದಂತಾಗಿದೆ. ಯಾತ್ರಿಯೊಬ್ಬರ ಕೈಯಲ್ಲಿ ಹಿಡಿದಿದ್ದ ಕಬ್ಬಿಣದ ರಾಡ್ ವಿದ್ಯುತ್ ಲೈನ್‌ಗೆ ತಗುಲಿ ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ಪಕ್ಷದ ಮುಖಂಡರಾದ ದೊಡ್ಡಪ್ಪ, ಸಂತೋಷ್ ಸೇರಿದಂತೆ ನಾಲ್ವರಿಗೆ ಜನರಿಗೆ ವಿದ್ಯುತ್ ಶಾಕ್ ಆಗಿದೆ ಎನ್ನುವ ವರದಿ ಬಂದಿದೆ. ಗಾಯಗೊಂಡವರನ್ನು ಹೊಸ ಮೋಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Bharat Jodo Yatra: Four people suffer Electric shock

ಸಣ್ಣಪುಣ್ಣ ಸುಟ್ಟಗಾಯಗಳಾದ ಕಾರಣ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಿಗೆ ರಾಹುಲ್ ಗಾಂಧಿ ಅವರಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಿಸಲಾಗಿದೆ. ಗಾಯಗೊಂಡವರನ್ನೆಲ್ಲ ಶಾಸಕ ನಾಗೇಂದ್ರ ಅವರು ಅಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಕೆಲಸವನ್ನು ಮಾಡಿದ್ದಾರೆ. ಹಾಗೆಯೇ ಸ್ಥಳದಲ್ಲಿಯೇ ಹಾಜರಿದ್ದು, ಗಾಯಾಳುಗಳ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ. ಶಾಸಕ ನಾಗೇಂದ್ರನ ಉತ್ತಮ ಕಾರ್ಯಕ್ಕೆ ಪಕ್ಷದ ಮುಖಂಡರಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+