ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ ಆನಂದ್ ಸಿಂಗ್ ಗೆ ಬಿಜೆಪಿ ನೋಟಿಸ್
ಬೆಂಗಳೂರು, ನವೆಂಬರ್ 10: ಬಳ್ಳಾರಿಯ ವಿಜಯನಗರದ ಶಾಸಕ ಆನಂದ್ ಸಿಂಗ್ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ಪಕ್ಷದ ನಿಲುವಿಗೆ ವಿರುದ್ಧವಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರಣಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಎನ್. ಶಂಕರಪ್ಪ ನೋಟಿಸ್ ಜಾರಿ ಮಾಡಿದ್ದಾರೆ.

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೆ ಬಹಿರಂಗವಾಗಿ ಸಮರ್ಥನೆ ಮಾಡಿಕೊಂಡಿದ್ದಕ್ಕೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದ್ದು 7 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.












Click it and Unblock the Notifications