ಕುಮಾರಸ್ವಾಮಿ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು: ಜಗದೀಶ್ ಶೆಟ್ಟರ್
Recommended Video

ಬಳ್ಳಾರಿ, ಏಪ್ರಿಲ್ 8: ಪುಲ್ವಾಮಾದಲ್ಲಿ ಉಗ್ರರ ದಾಳಿಯ ಬಗ್ಗೆ ಮೊದಲೇ ತಿಳಿದಿತ್ತು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ದಾಳಿಯ ಬಗ್ಗೆ ಮೊದಲೇ ಗೊತ್ತಿದ್ದರೆ ತಿಳಿಸಬೇಕಿತ್ತು. ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲ ಹಗುರವಾಗಿ ಮಾತನಾಡಬಾರದು ಎಂದು ಸಲಹೆ ನೀಡಿದರು.
ಎಲ್ಲ ಕಡೆ ಮೋದಿ ಸುನಾಮಿ ಇದೆ. ಮೈಸೂರು, ಹಾಸನ ಮತ್ತು ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ. ಕಾಂಗ್ರೆಸ್ ಕಾರ್ಯಕರ್ತರೂ ಮೋದಿ ಅವರಿಗೆ ಮತ ಹಾಕುತ್ತೇವೆ ಎನ್ನುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರ ಅಲೆ ಇದೆ ಎಂದರು.

ಲೋಕಸಭೆ ಚುನಾವಣೆ ಮುಗಿದ ಬಳಿಕ ಈ ಮೈತ್ರಿ ಸರ್ಕಾರ ಇರುವುದಿಲ್ಲ. ಆಮೇಲೆ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಬಳ್ಳಾರಿಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರಿಗೆ ಬಳ್ಳಾರಿಯ ಎಬಿಸಿಡಿ ಗೊತ್ತಿಲ್ಲ. ಆದರೂ ಅವರು ಇಲ್ಲಿನ ಬಿಜೆಪಿ ಅಭ್ಯರ್ಥಿ ಬಗ್ಗೆ ಮಾತನಾಡುತ್ತಾರೆ. ಜನರ ಮನಸು ಗೆಲ್ಲುವುದಕ್ಕೆ ಡಿಗ್ರಿ, Rank ಬೇಕಾಗಿಲ್ಲ. ಜನರ ಸಮಸ್ಯೆ ಆಲಿಸಲು ಮನಸಿದ್ದರೆ ಸಾಕು. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಏನು ಓದಿದ್ದಾರೆ? ಎಚ್ ಡಿ ರೇವಣ್ಣ 8ನೇ ತರಗತಿ ಓದಿ ಪಿಡಬ್ಲ್ಯೂಡಿ ಸಚಿವರಾಗಿದ್ದಾರೆ ಎಂದು ಹೇಳಿದರು.












Click it and Unblock the Notifications