ಬಳ್ಳಾರಿ ಗ್ರಾಮೀಣ ಫಲಿತಾಂಶ; ಬಿ. ಶ್ರೀರಾಮುಲು ಸೋಲು
ಬಳ್ಳಾರಿ, ಮೇ 13; ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಕ್ಷೇತ್ರ ಬದಲಾವಣೆ ಮಾಡಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಶನಿವಾರ ನಡೆಯುತ್ತಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಶ್ರೀರಾಮುಲು 37,514 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಬಿ. ನಾಗೇಂದ್ರ 61035 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.

2018ರ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಬಿ. ಶ್ರೀರಾಮುಲು ಕಣಕ್ಕಿಳಿದು ಗೆಲುವು ಕಂಡಿದ್ದರು. ಆದರೆ ಈ ಬಾರಿ ಅವರು ಕ್ಷೇತ್ರ ಬದಲಾವಣೆ ಮಾಡಿ ಬಳ್ಳಾರಿ ಗ್ರಾಮೀಣಕ್ಕೆ ತೆರಳಿದ್ದರು.

ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾದ ಬಿ. ಶ್ರೀರಾಮುಲು ಸೋಲು ಅಚ್ಚರಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಹಲವು ಸಚಿವರು ಸೋಲು ಕಂಡಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ. ನಾಗೇಂದ್ರ 103030 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಬಿ. ಶ್ರೀರಾಮುಲು 74031 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.












Click it and Unblock the Notifications