ಜನಾರ್ದನ ರೆಡ್ಡಿ ಬಳ್ಳಾರಿಗೆ ಹೋದರೆ ಏನು ಬೇಕಾದರೂ ಆಗಬಹುದು
ಬಳ್ಳಾರಿ, ನವೆಂಬರ್ 16 : ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವುದಕ್ಕೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿದೆ. ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಈ ಅರ್ಜಿಯ ಕುರಿತು ವಿಸ್ತೃತ ವಿಚಾರಣೆ ನಡೆಸಲಿದೆ.
ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡಬೇಕು ಎಂದು ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿಬಿಐ ಈ ಅರ್ಜಿಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.
ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದರೆ ಅಕ್ರಮ ಗಣಿಗಾರಿಕೆ ಪ್ರಕರಣದ ಸಾಕ್ಷ್ಯಗಳನ್ನು ನಾಶ ಮಾಡಲಿದ್ದಾರೆ. ಒಟ್ಟು 47 ಸಾಕ್ಷ್ಯಗಳು ಅಲ್ಲಿವೆ ಎಂದು ಸಿಬಿಐ ಆಕ್ಷೇಪಣೆಯಲ್ಲಿ ಹೇಳಿದೆ.

ಬಳ್ಳಾರಿಗೆ ಆರೋಪಿ ಭೇಟಿ ನೀಡಿದರೆ ಏನು ಬೇಕಾದರೂ ಆಗಬಹುದು. ಭದ್ರತೆಯಲ್ಲಿರುವ ಸಾಕ್ಷಿಗಳಿಗೆ ಸಹ ಬೆದರಿಕೆ ಹಾಕಲಾಗುತ್ತಿದೆ ಎಂದು ಸಿಬಿಐ ಆಕ್ಷೇಪಣೆಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಸುಪ್ರೀಂಕೋರ್ಟ್ ಸಿಬಿಐಗೆ ಆಕ್ಷೇಪಣೆ ಕುರಿತು ವಿಸ್ತೃತ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚನೆ ನೀಡಿದೆ ಮತ್ತು ಡಿಸೆಂಬರ್‌ನಿಂದ ಅರ್ಜಿಯ ವಿವರವಾದ ವಿಚಾರಣೆ ನಡೆಸುವುದಾಗಿ ಹೇಳಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಆರೋಪಿ. ಸುಪ್ರೀಂಕೋರ್ಟ್ ಪ್ರಕರಣದಲ್ಲಿ ಜಾಮೀನು ನೀಡುವಾಗ ಬಳ್ಳಾರಿಗೆ ಭೇಟಿ ನೀಡದಂತೆ ಷರತ್ತಿ ವಿಧಿಸಿದೆ. ಬಳ್ಳಾರಿಗೆ ಭೇಟಿ ನೀಡಲು ನ್ಯಾಯಾಲಯ ಅನುಮತಿ ಪಡೆಯಬೇಕಿದೆ.












Click it and Unblock the Notifications