ಬಳ್ಳಾರಿ; ಜನರ ಸುರಕ್ಷತೆಗಾಗಿ 550 ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು

ಬಳ್ಳಾರಿ, ಮಾರ್ಚ್ 04: ಕಳೆದ ವರ್ಷ ಬಳ್ಳಾರಿ ನಗರದಲ್ಲಿ ಕರ್ನಾಟಕ ಸಾರ್ವಜನಿಕ ಸುರಕ್ಷತಾ ಕಾಯ್ದೆ-2017ಗೆ ಒಳಪಡುವ 550 ವಾಣಿಜ್ಯ ಸ್ಥಳಗಳನ್ನು ಗುರುತಿಸಲಾಗಿದೆ. ಈ 550 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುತ್ತದೆ.

ಗುರುವಾರ ನಗರದ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಕರ್ನಾಟಕ ಸಾರ್ವಜನಿಕ ಸುರಕ್ಷತಾ ಕಾಯ್ದೆ-2017 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, "ನಾಗರಿಕರ ಕಷ್ಟಗಳಿಗೆ ಸ್ಪಂದಿಸುವ ಮತ್ತು ಅವರ ಸಮಸ್ಯೆಗಳನ್ನು ಶೀಘ್ರಗತಿಯಲ್ಲಿ ಬಗೆಹರಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ದಿನದ 24 ಗಂಟೆಯೂ ಪೊಲೀಸ್ ಸೇವೆಯನ್ನು ಒದಗಿಸಲು ಒಂದು ತಿಂಗಳ ಅವಧಿಯೊಳಗೆ ನಾಲ್ಕೈದು ಪೊಲೀಸ್ ವಾಹನಗಳು ಆಗಮಿಸಲಿವೆ" ಎಂದರು.

CCTV Camera Installation In 550 Public Place In Ballari

"ಬಳ್ಳಾರಿ ನಗರದಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರಿಗೆ ಪೊಲೀಸ್ ಸೇವೆಯನ್ನು ಒದಗಿಸುವ ಉದ್ದೇಶವಿದೆ. 550 ವಾಣಿಜ್ಯ ಸ್ಥಳಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಒಂದು ತಿಂಗಳ ಅವಧಿಯಲ್ಲಿ ಈ ಕಾರ್ಯ ಪೂರ್ಣವಾಗಲಿದೆ" ಎಂದು ಹೇಳಿದರು.

"100 ರಿಂದ 500 ಜನ ಒಂದು ಕಡೆ ಸೇರುವಂತಹ ಸ್ಥಳಗಳಿಗೆ ಈ ಕಾಯ್ದೆ ಅನ್ವಯವಾಗುತ್ತದೆ. ಕಾಯ್ದೆ ಅನ್ವಯ ಸಿನಿಮಾ ಥಿಯೇಟರ್, ಪೆಟ್ರೋಲ್ ಬಂಕ್, ಶಾಲೆ-ಕಾಲೇಜು, ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಕಲ್ಯಾಣ ಮಂಟಪ್ಪ, ಚರ್ಚ್, ಆಸ್ಪತ್ರೆಗಳು, ಕಾಂಪ್ಲೆಕ್ಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲಾಗುತ್ತದೆ" ಎಂದು ವಿವರಣೆ ನೀಡಿದರು.

ದಂಡ ವಿಧಿಸಲಾಗುತ್ತದೆ; ಸಿಸಿ ಕ್ಯಾಮೆರಾ ಅಳವಡಿಸದಿರುವವರಿಗೆ ಮೊದಲ ಬಾರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ. ಒಂದು ತಿಂಗಳ ಅವಧಿಯಲ್ಲಿ ಅಳವಡಿಸದಿದ್ದಲ್ಲಿ 5 ಸಾವಿರ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನೋಟಿಸ್ ನೀಡಿದಾಗ 10 ಸಾವಿರ ದಂಡ ವಿಧಿಸಲಾಗುತ್ತದೆ.

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ 5-6 ಜನರು ಸೇರಿಕೊಂಡು ಒಂದು ತಂಡ ತಯಾರು ಮಾಡಿಕೊಳ್ಳಿ, ನಿಮ್ಮ ನಿಮ್ಮ ಏರಿಯಾಗಳಲ್ಲಿ ಎಲ್ಲಿ ಸಿಸಿ ಕ್ಯಾಮೆರಾ ಅವಶ್ಯಕತೆಯಿದೆ ಎನ್ನವುದನ್ನು ಪೊಲೀಸರ ಗಮನಕ್ಕೆ ತರುವ ಕೆಲಸವನ್ನು ಮಾಡಿ. ಇದಕ್ಕೆ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಜನರಿಗೆ ಮಾಹಿತಿ ನೀಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+