ಬಳ್ಳಾರಿಯಲ್ಲಿ ಸಚಿವ ಅನಂತ್ ಕುಮಾರ್ ಹೆಗಡೆ ಕಾರಿಗೆ ಮುತ್ತಿಗೆ

ಬಳ್ಳಾರಿ, ಜನವರಿ 20 : ಸಂವಿಧಾನ ಬದಲಾವಣೆಗಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದೆ.

ಇದರ ಬೆನ್ನಲ್ಲೇ ಬೆಳ್ಳಾರಿಯಲ್ಲಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ತೆರಳುವಾಗ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಸಚಿವ ಅನಂತ ಕುಮಾರ್ ಹೆಗಡೆಯವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಜನಪ್ರತಿನಿಧಿಯಾಗಿ ಇದೇ ಮೊದಲ ಭಾರಿ ಸಂವಿಧಾನ ಬದಲಾಯಿಸುತ್ತೇನೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡುವ ಮೂಲಕ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದೆ. ಸಂವಿಧಾನ ಯಾರ ಒಬ್ಬರ ಆಸ್ತಿಯಲ್ಲ.

Central minister Hegde face protest in Bellari too

ಇಡೀ ವಿಶ್ವವೇ ಭಾರತ ಸಂವಿಧಾನದ ಮಾರ್ಗದಲ್ಲಿ ಸರ್ಕಾರಗಳನ್ನು ನಡೆಸುತ್ತಿವೆ. ಇಂತಹ ಪವಿತ್ರ ಸಂವಿಧಾನದ ಬಗ್ಗೆ ಹೇಳಿಕೆ ನೀಡಲು ನಾಚಿಕೆಯಾಗಬೇಕು ಎಂದು ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹೆಗಡೆಯವರ ಕಾರು ಕಾರ್ಯಕ್ರಮದ ಸ್ಥಳದಿಂದ ಹೊರ ಬಂದಾಕ್ಷಣ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಬಳ್ಳಾರಿ ಐಬಿ ಎದುರು ಪ್ರತಿಭಟನೆ ನಡೆಸಿದರು. ಸಂಸದ ಶ್ರೀರಾಮುಲು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತ ಗೊಳಿಸಲು ಉತ್ನಿಸಿದರೂ ದಲಿತ ಸಂಘಟನೆಗಳು ಸಂಧಾನಕ್ಕೆ ಸಿದ್ಧವಿರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+