ಚಳ್ಳಕೆರೆ ಬಳಿ ಕಾರು ಅಪಘಾತದಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ನಿಧನ
ಬಳ್ಳಾರಿ, ಏಪ್ರಿಲ್, 02: ಪಾರಂಪರಿಕ ತೊಗಲು ಗೊಂಬೆಯಾಟದ ಮೂಲಕ ರಾಜ್ಯ, ದೇಶ ಮಾತ್ರವಲ್ಲದೇ ವಿದೇಶಗಳಲ್ಲಿ ತಮ್ಮ ಕಲೆಯ ರಸಾಸ್ವಾದವನ್ನು ಹಂಚಿದ್ದ ಹಿರಿಯ ಕಲಾವಿದ, ರಾಷ್ಟ್ರಪತಿ ಪ್ರಶಸ್ತಿ ವಿಜೇತ ನಾಡೋಜ ಬೆಳಗಲ್ಲು ವೀರಣ್ಣ ಭಾನುವಾರ (ಮಾರ್ಚ್ 02) ಬೆಳಗ್ಗೆ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿಯ ತಳಕು ಸಮೀಪ ಅಪಘಾತ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗಾಯಗೊಂಡ ಕಾರಿನ ಚಾಲಕನಿಗೆ ಚಿಕಿತ್ಸೆಗೆ ಒಳಗಾಗಿದ್ದಾರೆ.

ಮೂಲತಃ ತೊಗಲು ಗೊಂಬೆಯಾಟದ ಕಲಾವಿದರಾದ ಬೆಳಗಲ್ಲು ವೀರಣ್ಣ ಅವರು, ತೊಗಲು ಗೊಂಬೆಯಾಟದ ಹಿರಿಮೆಯನ್ನು ಸಪ್ತ ಸಾಗರದ ಆಚೆ ತಲುಪಿಸಿದ ಅಪರೂಪದ ಕಲಾವಿದರಾಗಿದ್ದಾರೆ. ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನು ಕಟ್ಟಿ ಊರು, ರಾಜ್ಯ, ಹೊರ ರಾಜ್ಯ, ದೇಶ, ವಿದೇಶಕ್ಕೂ ಪ್ರಯಾಣ ಮಾಡಿದ್ದರು.
ಇದೀಗ ಅವರ ನಿಧನದಿಂದ ರಾಜ್ಯದ ಕಲಾಲೋಕ ಬಡವಾಗಿದೆ. ವೀರಣ್ಣನವರು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅಲ್ಲೆ ಜಿಲ್ಲೆಯ ಗಣ್ಯರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ಇತ್ತೀಚೆಗಷ್ಟೇ ನಡೆದಿದೆ. ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದು, ಸಾಲ ತೀರಿಸಲಾಗದೇ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ಅವಳಿ ಹೆಣ್ಣುಮಕ್ಕಳು ಕೂಡ ಇದ್ದಾರೆ ಎನ್ನಲಾಗಿದೆ.
ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್‌ನಲ್ಲಿ ಬರೆದಿಟ್ಟಿರುವುದು ಇದೀಗ ಬಯಲಿಗೆ ಬಂದಿದೆ. ಈ ಕುಟುಂಬವು ಮಾರ್ಚ್ 27ರಂದು ಒಂದು ದಿನದ ಮಟ್ಟಿಗೆ ಲಡ್ಜ್‌ನಲ್ಲಿ ರೂಂ ಬುಕ್ ಮಾಡಿದ್ದು, ನಂತರ ಎರಡು ದಿನಕ್ಕೆ ವಿಸ್ತರಣೆ ಮಾಡಿಕೊಂಡಿದೆ.
ನಿನ್ನೆ ಸಂಜೆ (ಮಾರ್ಚ್ 30) ರೂಂ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಅಲ್ಲಿನ ಸಿಬ್ಬಂದಿ ಇಂದು ಬೆಳಗಿನ ಜಾವ ತಪಾಸಣೆ ನಡೆಸಿದ್ದು, ಆಗ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಇನ್ನು ನೀರಿನ ಟ್ಯಾಂಕ್ ಕಟ್ಟಲು ನಿರ್ಮಾಣ ಹಂತದ ಮನೆಯ ತಡೆಗೋಡೆ ಕೆಡವಿದ್ದರಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜೇಶ್, ಶೇಖಪ್ಪ, ಸುಶೀಲಮ್ಮ ಮತ್ತು ಜ್ಯೋತಿ ಎಂಬುವರು ಇದೀಗ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಮ್ಮರಚೇಡು ಗ್ರಾಮ ಠಾಣಾ ಜಮೀನಿನಲ್ಲಿ ಇದ್ದ ನೀರಿನ ಟ್ಯಾಂಕ್ ಸೋರುತ್ತಿತ್ತು. ಆದ್ದರಿಂದ ಹೊಸದಾಗಿ ಟ್ಯಾಂಕ್ ಕಟ್ಟಲು ಹಳೆಯದನ್ನು ಕೆಡವಲಾಗಿತ್ತು. ಅದೇ ಜಾಗದಲ್ಲಿ ರಾಜೇಶ್, ಶೇಖಪ್ಪ ಅವರು ಮನೆಗೆ ನಿರ್ಮಿಸಿದ್ದ ತಡೆಗೋಡೆಯನ್ನು ಕೂಡ ಕೆಡವಲಾಗಿದೆ. ತಹಶೀಲ್ದಾರ್ ಬಲರಾಂ ಕಟ್ಟಿಮನಿ ಸ್ಥಳಕ್ಕೆ ತೆರಳಿ, ತಡೆಗೋಡೆ ಕೆಡವಲು ಹೇಳಿದ್ದರು.
ಮನೆ ಮಾಲೀಕರು ಅವರ ಮಾತು ಕೇಳದ್ದಿದ್ದರಿಂದ ಅಧಿಕಾರಿಗಳೇ ಪೊಲೀಸರ ಸಹಾಯದಿಂದ ಗೋಡೆಯನ್ನು ಕೆಡವಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಸಂಬಂಧ ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಇನ್ಸ್‌ಪೆಕ್ಟರ್ ನಿರಂಜನ್ ಕುಮಾರ್ ತಿಳಿಸಿದ್ದರು.












Click it and Unblock the Notifications