ಬಳ್ಳಾರಿ; ಎನ್‌ಐಎ ದಾಳಿ, ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ
ಬಳ್ಳಾರಿ, ಡಿಸೆಂಬರ್ 18; ಬಳ್ಳಾರಿ ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆಗೆ ಮಂಗಳವಾರ ನಡೆಯಬೇಕಿದ್ದ ಚುನಾವಣೆ ಮುಂದೂಡಿಕೆಯಾಗಿದೆ. ಮೇಯರ್ ಆಗಿದ್ದ ಕಾಂಗ್ರೆಸ್ ಸದಸ್ಯೆ ಡಿ. ತ್ರಿವೇಣಿ ನವೆಂಬರ್ 4ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಉಪ ಮೇಯರ್ ಅಧಿಕಾರ ನೋಡಿಕೊಳ್ಳುತ್ತಿದ್ದಾರೆ.
ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ಡಿಸೆಂಬರ್ 19ರಂದು ಮಧ್ಯಾಹ್ನ 12.30ಕ್ಕೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ. ಖಲೀಲ್ ಸಾಬ್ ತಿಳಿಸಿದ್ದರು.

ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಸುತ್ತ-ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ ಹೊರಡಿಸಿದ್ದರು.
ಚುನಾವಣೆ ಮುಂದೂಡಿಕೆ; ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಸೋಮವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಮುಂದಿನ ಚುನಾವಣಾ ದಿನಾಂಕ ಇನ್ನು ನಿಗದಿಯಾಗಬೇಕಿದೆ.
ದಿನಾಂಕ 19/12/2023ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಬಳ್ಳಾರಿ ಅವರು ವರದಿ ಸಲ್ಲಿಸಿ ಬಳ್ಳಾರಿ ನಗರದಲ್ಲಿ 7-8 ಕಡೆಗಳಲ್ಲಿ ಎನ್‌ಐಎ ದಾಳಿಯಾಗಿರುವುದಾಗಿ ತಿಳಿಸಿದ್ದಾರೆ.
ಅಲ್ಲದೇ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ 4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಇದರಲ್ಲಿ 4 ಜನ ಆಕ್ಷಾಂಕಿಗಳು ಗುಂಪು-ಗುಂಪಾಗಿ ಸ್ಥಳಾಂತರಗೊಂಡಿದ್ದು, ನಾಳೆ ನಡೆಯಲಿರುವ ಮೇಯರ್ ಸ್ಥಾನದ ಚುನಾವಣೆ ದಿನದಂದು ಎಲ್ಲರೂ ಗುಂಪಾಗಿ ಬಂದು ಗಲಾಟೆ ಮಾಡುವ ಸಾಧ್ಯತೆಗಳಿದ್ದು ನಗರದಲ್ಲಿ ಬಿಗುವಿನ ವಾತಾವರಣ ಉದ್ಭವಿಸಿ ಪಕ್ಷ-ಪಕ್ಷಗಳ ನಡುವೆ ರಾಜಕೀಯ ವೈಷಮ್ಯದಿಂದ ಗಲಾಟೆಗಳಾಗುವ ಸಾಧ್ಯತೆಗಳು ಎದ್ದು ಕಾಣುತ್ತಿರುವುದಾಗಿ ವರದಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳು ಬಳ್ಳಾರಿ ಅವರು ಜಿಲ್ಲಾ ಪೊಲೀಸ್ ಅಧಿಕ್ಷಕರು ಬಳ್ಳಾರಿ ಅವರು ಪ್ರಸ್ತಾಪಿಸುವ ವಿಷಯವನ್ನು ಪುನರ್ ಉಚ್ಚರಿಸಿ ಅಂತಿಮವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿ ಶಾಂತಿ ಕದಡುವ ಸಾಧ್ಯತೆಗಳು ಇದ್ದು ಪ್ರಸ್ತುತ ಸನ್ನಿವೇಶವು ಸೂಕ್ತವಾಗಿರುವುದಿಲ್ಲವೆಂದು ವರದಿ ಸಲ್ಲಿಸಿರುತ್ತಾರೆ.
ಕಾರಣ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಳ್ಳಾರಿ ಅವರ ವರದಿಯಾಧಾರದ ಮೇರೆಗೆ ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗಿ ಶಾಂತಿ ಕದಡುವ ಸಾಧ್ಯತೆಗಳು ಇರುವುದಾಗಿ ಪ್ರಸ್ತುತ ಸನ್ನಿವೇಶವು ಸೂಕ್ತವಾಗಿಲ್ಲರುವುದಿಲ್ಲವೆಂದು ವರದಿಯಾಗಿರುವ ಹಿನ್ನೆಲೆಯಲ್ಲಿ ದಿನಾಂಕ 19/12/2023ರಂದು ನಡೆಯಬೇಕಿದ್ದ ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನದ ಚುನಾವಣೆಯನ್ನು ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ಮುಂದೂಡಲಾಗಿದೆ.
ಈ ಮುಂದುಡಲಾದ ಚುನಾವಣೆಯ ಪ್ರತ್ಯೇಕ ದಿನಾಂಕವನ್ನು ನಿಗದಿಪಡಿಸಿ ಸಂಬಂಧಪಟ್ಟ ಎಲ್ಲರಿಗೂ ನೊಟೀಸ್ ಮುಖಾಂತರ ತಿಳಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತರು, ಕಲಬುರಗಿ ವಿಭಾಗ, ಕಲಬುರಗಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
144 ಸೆಕ್ಷನ್ ಜಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದರು.
ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಮಹಾನಗರ ಪಾಲಿಕೆಯ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದರು.
ಈ ಆದೇಶದಂತೆ ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿತ್ತು.
ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯುವುದು, ಪಟಾಕಿ/ ಸಿಡಿಮದ್ದು ಸಿಡಿಸುವುದು. ಕಾರು/ ಬೈಕ್ ಮತ್ತು ಇತರೆ ವಾಹನಗಳಲ್ಲಿ ಜಾಥಾವನ್ನು ಆಯೋಜಿಸುವುದು ಸಹ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ತಿರುಗಾಡುವುದು (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಹೊರತು ಪಡಿಸಿ) ನಿಷೇಧಿಸಲಾಗಿತ್ತು.
ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ಪ್ರತಿಕೃತಿ ಪ್ರದರ್ಶನವನ್ನು ಹಾಗೂ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications