ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೀಸಲಾತಿ ಹೆಚ್ಚಿಸಿ ತಳಸಮುದಾಯದವರಿಗೆ ಸ್ವಾಭಿಮಾನ ಬದುಕು ಕಲ್ಪಿಸಿಕೊಡಲಾಗಿದೆ: ಬೊಮ್ಮಾಯಿ

|
Google Oneindia Kannada News

ಬಳ್ಳಾರಿ, ನವೆಂಬರ್ 20: ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಮೂಲಕ ಇಡೀ ಭಾರತವನ್ನು ಒಗ್ಗೂಡಿಸಿದ್ದಾರೆ. ಏಕ್ ಭಾರತ, ಶ್ರೇಷ್ಠ ಭಾರತ ಎಂದು ಎಲ್ಲಾ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದಾರೆ. ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲು ಸರ್ಕಾರ, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾನುವಾರ ಭಾರತೀಯ ಜನತಾ ಪಕ್ಷದ ಎಸ್.ಟಿ. ಮೋರ್ಚಾ ವತಿಯಿಂದ ಬಳ್ಳಾರಿಯ ಜೀ ವೃತ್ತದ ಬಳಿ ಆಯೋಜಿಸಿರುವ ಎಸ್.ಟಿ.ಮೋರ್ಚಾ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಸ್ ಸಿ ಸಮುದಾಯಕ್ಕೆ 15 ರಿಂದ 17 % ಹಾಗೂ ಎಸ್ ಟಿ ಸಮುದಾಯಗಳಿಗೆ 3 ರಿಂದ 7 % ಮೀಸಲಾತಿ ಹೆಚ್ಚಳ ಸಂವಿಧಾನ ಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲಾಗಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಎಸ್ ಸಿ- ಎಸ್ ಟಿ ಸಮುದಾಯಗಳಿಗೆ 28 ಸಾವಿರಕ್ಕೂ ಹೆಚ್ಚಿನ ಅನುದಾನವನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ 6 ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಯಿತು. ಹಾಲು ಮತದ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಗಿನೆಲೆ ಅಭಿವೃದ್ಧಿ ಅನುದಾನ ನೀಡಿದರು. ವಾಲ್ಮೀಕಿ ಜಯಂತಿಯನ್ನು ಕೂಡ ಘೋಷಣೆ ಮಾಡಿದ್ದರು.

CM Basavaraj Bommai Speech during BJP SC-ST Morcha held in Ballari

ಇದೀಗ ನಮ್ಮ ಸರಕಾರ ಎಸ್ ಸಿ- ಎಸ್ ಟಿ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಆಶಯದೊಂದಿದೆ ಯೋಜನೆಗಳನ್ನು ಜಾರಿಗೊಳಿಸಿದೆ. 100 ಅಂಬೇಡ್ಕರ್ ಹಾಸ್ಟೆಲ್‌ಗಳು, 50 ಕನಕದಾಸ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಐದು ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಐದು ಲಕ್ಷ ಯುವಕರಿಗೆ ವಿವೇಕಾನಂದ ಯುವಶಕ್ತಿ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.

ವಾಲ್ಮೀಕಿ ನಮ್ಮ ಸರ್ಕಾರಕ್ಕೆ ಸ್ಪೂರ್ತಿ

ವಾಲ್ಮೀಕಿ ರಚಿಸಿದ ರಾಮಾಯಣ ಹಿಂದೂ ಧರ್ಮದ ಪವಿತ್ರ ಧರ್ಮಗ್ರಂಥಗಳಲ್ಲಿ ಒಂದಾಗಿದೆ. ಮೊಘಲರನ್ನು ಹಿಮ್ಮೆಟ್ಟಿಸಿದ್ದು, ಈ ಸಮುದಾಯದ ವೀರ ನಾಯಕರು. ವೀರ ಮದಕರಿ, ಏಕಲವ್ಯ, ಬೇಡರ ಕಣ್ಣಪ್ಪ ಎಲ್ಲರೂ ವಾಲ್ಮೀಕಿ ಕುಲವನ್ನು ಶ್ರೇಷ್ಠಗೊಳಿಸಿದ್ದಾರೆ. ಅವರ ಹಾದಿಯಲ್ಲಿ ವಾಲ್ಮಿಕ ಜನಾಂಗ ದೇಶ ಕಟ್ಟುವ ಕೆಲಸ ಮಾಡಬೇಕೆಂದು ಎಂದರು.

CM Basavaraj Bommai Speech during BJP SC-ST Morcha held in Ballari

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾರಿಗೆ ಹಾಗೂ ಎಸ್ಟಿ ಇಲಾಖೆಗಳ ಸಚಿವ ಬಿ‌. ಶ್ರೀರಾಮುಲು ಸೇರಿದಂತೆ ಮಂತ್ರಿಗಳು, ಶಾಸಕರಿದ್ದರು.

English summary
The hike in quota for ST from 15 per cent to 17 per cent and for ST from 3 per cent to 7 per cent was a constitutional decision and this has allowed them to live with self-respect, Chief Minister Basavaraj Bommai said in Ballari
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X