ಅ.02ರಂದು ವಿಜಯನಗರ ಜಿಲ್ಲೆ ಉದ್ಘಾಟಿಸಲಿದ್ದಾರೆ ಸಿಎಂ ಬೊಮ್ಮಾಯಿ: ಸಂಪೂರ್ಣ ವಿವರ ಇಲ್ಲಿದೆ

ವಿಜಯನಗರ, ಸೆಪ್ಟೆಂಬರ್ 29: ವಿಜಯನಗರ ಜಿಲ್ಲೆ ಅಕ್ಟೋಬರ್ 02ರಂದು ಅಧಿಕೃತವಾಗಿ ಉದ್ಘಾಟನೆಯಾಗಲಿದ್ದು, ಅ.02 ಮತ್ತು 03ರಂದು ಎರಡು ದಿನಗಳ ಕಾಲ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ವಿಜಯನಗರ ಜಿಲ್ಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಸಚಿವರು ಉಪಸ್ಥಿತರಿರಲಿದ್ದು, ವಿಜಯನಗರ ಜಿಲ್ಲಾ ಉದ್ಘಾಟನೆ ಸಮಾರಂಭಕ್ಕೆ ರಾಜಕಾರಿಣಿಗಳು, ಸ್ವಾಮೀಜಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ವಿಜಯನಗರ ಜಿಲ್ಲಾ ಉದ್ಘಾಟನೆಯ ಆಹ್ವಾನ ಪತ್ರಿಕೆಯನ್ನು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆನಂದ್ ಸಿಂಗ್ ಹಂಚಿಕೊಂಡಿದ್ದಾರೆ.

Complete Details About Inauguration Of Vijayanagar District Ceremony

ಅಕ್ಟೋಬರ್ 02ರ ಶನಿವಾರ ಸಂಜೆ 6 ಗಂಟೆಗೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುವ ವಿದ್ಯಾರಣ್ಯ ಭವ್ಯ ವೇದಿಕೆಯಲ್ಲಿ ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಸಂಜೆ 4 ಗಂಟೆಗೆ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ "ವಿಜಯನಗರ ವೈಭವ' ಮೆರವಣಿಗೆ ನಡೆಯಲಿದೆ.

ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಘನ ಉಪಸ್ಥಿತರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇರಲಿದ್ದಾರೆ. ವಿಶೇಷವೆಂದರೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಖಂಡ ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಅನುಮತಿ ನೀಡಿದ್ದರು.

ಇನ್ನು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆನಂದ್ ಸಿಂಗ್ ವಹಿಸಲಿದ್ದಾರೆ.

Complete Details About Inauguration Of Vijayanagar District Ceremony

ದಿವ್ಯ ಸಾನಿಧ್ಯದಲ್ಲಿ ನಾಡಿನ ಹಲವು ಮಠಾಧೀಶರು ಪಾಲ್ಗೊಳ್ಳಿದ್ದು, ಉಜ್ಜಯಿನಿ ಪೀಠದ ಅಭಿನವ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ, ಹಂಪಿಯ ವಿರುಪಾಕ್ಷೇಶ್ವರ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ, ಸಂಗನಬಸವ ಮಹಾಸ್ವಾಮೀಜಿ, ದಯಾನಂದಪುರಿ ಮಹಾಸ್ವಾಮಿಗಳು, ಪೂರ್ಣಾನಂದ ಭಾರತಿ ಮಹಾಸ್ವಾಮೀಜಿ, ಮಲ್ಲಿಕಾರ್ಜುನ ಮಹಾಸ್ವಾಮಿ, ಅಭಿನವ ಹಾಲಸಿದ್ದ ಶಿವಯೋಗಿಗಳು, ಮಹೇಶ್ವರ ಮಹಾಸ್ವಾಮಿಗಳು, ದಿಗಂಬರ ರಾಜಭಾರತಿ ಸ್ವಾಮೀಜಿ ಹಾಗೂ ಮುಂತಾದವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಸಮಾರೋಪ ಸಮಾರಂಭ
ಅದೇ ರೀತಿ ಅಕ್ಟೋಬರ್ 3ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ದಿವ್ಯ ಸಾನಿಧ್ಯವಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಸರ್ದಾರ್ ಸೇವಾಲಾಲ್ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಭಾಷಣವನ್ನು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ರಾಜೀವ್ ಚಂದ್ರಶೇಖರ್ ಮಾಡಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆನಂದ್ ಸಿಂಗ್ ವಹಿಸಲಿದ್ದಾರೆ.

Complete Details About Inauguration Of Vijayanagar District Ceremony

ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ್ ಖೂಬಾ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಅಬಕಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಪಾಲ್ಗೊಳ್ಳಲಿದ್ದಾರೆ.

ಇನ್ನುಳಿದಂತೆ ವಿಜಯನಗರ ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಐಎಎಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+