ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ; ಜೂನ್ 2ರಿಂದ ಮೂರು ದಿನ ಬ್ಯಾಂಕ್ ಬಂದ್

|
Google Oneindia Kannada News

ಬಳ್ಳಾರಿ, ಮೇ 31; ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ತಡೆಯಲು ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಜೂನ್ 7ರವರೆಗೆ ಇದನ್ನು ವಿಸ್ತರಣೆ ಮಾಡಲು ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸಂಪೂರ್ಣ ಲಾಕ್‌ಡೌನ್ ಹಿನ್ನಲೆಯಲ್ಲಿ ಜೂನ್‌ 2ರಿಂದ ಮೂರು ದಿನಗಳ ಕಾಲ ಬ್ಯಾಂಕ್‍ಗಳು ಹಾಗೂ ಹಣಕಾಸು ವ್ಯವಹಾರ ಹೊಂದಿರುವ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ" ಎಂದು ಹೇಳಿದ್ದಾರೆ.

ಬಳ್ಳಾರಿ; ಉಚಿತ ಸೇವೆ ಮಾಡಲು ಬಂದ ಗುಜರಾತ್ ನರ್ಸಿಂಗ್ ವಿದ್ಯಾರ್ಥಿಗಳುಬಳ್ಳಾರಿ; ಉಚಿತ ಸೇವೆ ಮಾಡಲು ಬಂದ ಗುಜರಾತ್ ನರ್ಸಿಂಗ್ ವಿದ್ಯಾರ್ಥಿಗಳು

ಜೂನ್ 2ರಿಂದ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಶನಿವಾರ ಮತ್ತು ಭಾನುವಾರ ಬ್ಯಾಂಕ್‍ಗಳು ಮುಚ್ಚಿರಲಿವೆ. ಇದರಿಂದಾಗಿ 5 ದಿನಗಳ ಕಾಲ ಬ್ಯಾಂಕ್ ಚಟುವಟಿಕೆಗಳು ಇರುವುದಿಲ್ಲ.

ಬಳ್ಳಾರಿ; ಸಂಪೂರ್ಣ ಲಾಕ್‌ಡೌನ್, ಖರೀದಿಗೆ ಜನರ ಸಾಲು ಬಳ್ಳಾರಿ; ಸಂಪೂರ್ಣ ಲಾಕ್‌ಡೌನ್, ಖರೀದಿಗೆ ಜನರ ಸಾಲು

Complete Lockdown Bank Close In Ballari From June 2

ಬ್ಯಾಂಕ್‌ಗಳು ಬಂದ್ ಆಗಿದ್ದರೂ ಎಲ್ಲಾ ಎಟಿಎಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಹಣವಿರುವಂತೆ ನೋಡಿಕೊಳ್ಳಲಾಗುತ್ತದೆ. ಜನರು ಅನಗತ್ಯ ಭಯಗೊಂಡು ಬ್ಯಾಂಕ್‍ಗಳಿಗೆ ಆಗಮಿಸಿ ವ್ಯವಹಾರ ಮಾಡಬೇಡಿ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಕೊವಿಡ್-19 ಪಾಸಿಟಿವಿಟಿ: ಟಾಪ್-5 ಪಟ್ಟಿಯಲ್ಲಿ ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆ!ಕೊವಿಡ್-19 ಪಾಸಿಟಿವಿಟಿ: ಟಾಪ್-5 ಪಟ್ಟಿಯಲ್ಲಿ ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆ!

ಇನ್ನೂ ಒಂದು ವಾರ ಕಟ್ಟುನಿಟ್ಟಾಗಿ ಲಾಕ್‌ಡೌನ್ ನಿಯಮ ಪಾಲಿಸಿದರೇ ಸೋಂಕು ನಿಯಂತ್ರಣಕ್ಕೆ ಬರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮತಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಸೋಮವಾರದ ವರದಿಯಂತೆ ಬಳ್ಳಾರಿಯಲ್ಲಿ 437 ಹೊಸ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 9021.

English summary
Due to complete lockdown bank will close in Ballari district from June 2 to three days said Pavan Kumar Malapati deputy commissioner of Ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X