Karnataka Polls 2023 : ಇದೇ ತಿಂಗಳಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ವಿಜಯನಗರ, ಜನವರಿ, 02: ಮುಂಬರುವ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಗರಿಬೊಮ್ಮನಹಳ್ಳಿಯಲ್ಲಿ ತಿಳಿಸಿದರು.
ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್‌ಗೆ ಬಂದಿಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಕಾಂಗ್ರೆಸ್‌ನ ಶಕ್ತಿ ಹೆಚ್ಚಿದೆ, ಕಾಂಗ್ರೆಸ್ ಪರ ಗಾಳಿಯೂ ಬಿಸುತ್ತಿದೆ. ಹಾಗಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು. ಯಾರೇ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಅವರು ಇನ್ನೇನಾದರೂ ಹೇಳಿಕೊಳ್ಳಲಿ ಸ್ವಂತ ಬಲದ ಮೇಲೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಈ ಹಿಂದೆ ಎಸ್. ಬಂಗಾರಪ್ಪ, ಬಿ.ಎಸ್. ಯಡಿಯೂರಪ್ಪ, ಬಿ.ಶ್ರೀರಾಮುಲು ಸೇರಿದಂತೆ ಹಲವರು ಪಕ್ಷ ಕಟ್ಟಿದ್ದರು. ಏನಾಗಿದೆ ಎನ್ನುವುದು ಎಲ್ಲರಿಗೂ ಅದರ ಇತಿಹಾಸ ಗೊತ್ತಿದೆ. ಹಾಗಂತ ನಾನು ಅವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾನೆ ಎಂದರ್ಥವಲ್ಲ. ಪ್ರಜಾಪ್ರಭುತ್ವದಲ್ಲಿ ಅಂತಿಮವಾಗಿ ಮತದಾರರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಎಲ್ಲ ಭಾಗದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ
ಹಾಗೆಯೇ ರಾಜ್ಯದಲ್ಲಿ ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳ ಪರಿಣಾಮ ಬಿಜೆಪಿ ಮೇಲೆ ಬೀರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಇತ್ತೀಚೆಗಷ್ಟೇ ಹೇಳಿದ್ದರು. ಬಳ್ಳಾರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಪರೋಕ್ಷವಾಗಿ ಸ್ನೇಹಿತ ಜನಾರ್ಧನ್ ರೆಡ್ಡಿಯ ಹೊಸ ಪಕ್ಷದ ಪ್ರಭಾವ ಬೀರಲ್ಲ ಎಂದಿದ್ದರು. ಶ್ರೀರಾಮುಲು ಮುಖ ನೋಡಿ, ಮತ್ತೊಬ್ಬರು (ಜನಾರ್ಧನ್ ರೆಡ್ಡಿ) ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲ ಕಲ್ಯಾಣ ಕರ್ಣಾಟಕದ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ. ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.
ಯಾವುದೇ ಪ್ರಾದೇಶಿಕ ಪಕ್ಷ ಪ್ರಭಾವ ಬೀರಲ್ಲ
ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲ. ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್, ಕರುಣಾಕರ್ ರೆಡ್ಡಿ, ಸೋಮಶೇಖರ್ ರೆಡ್ಡಿ ಗೆಲುವು ಸಾಧಿಸಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಪಕ್ಷ ಕಟ್ಟಬಹುದು, ಚುನಾವಣೆಯಲ್ಲಿ ಸ್ಪರ್ಧಿಸಬಹು. ಆದರೆ ಜನರ ಒಲವು ಬಿಜೆಪಿ ಪಕ್ಷದ ಮೇಲೆ ಇದೆ. ದೇಶದ ಚುನಾವಣೆ ಮೋದಿ ಹಾಗೂ ರಾಜ್ಯದ ಚುನಾವಣೆ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ಪ್ರಾದೇಶಿಕ ಪಕ್ಷದಿಂದ ಕಾರ್ಯಕರ್ತರಲ್ಲಿ ಯಾವದೇ ಗೊಂದಲ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದರು.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ನವರು ಟೋಪಿ ಹಾಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್‌ನವರು ಮೀಸಲಾತಿ ವಿಚಾರದಲ್ಲಿ ಯಾರಿಗೂ ನ್ಯಾಯ ಕೊಟಿಲ್ಲ ಎಂದಿದ್ದಾರೆ. ಆದರೆ ಮೀಸಲಾತಿ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡುವ ನೈತಿಕತೆ ಇಲ್ಲ. ಐವತ್ತು ವರ್ಷಗಳಿಂದ ಕಾಂಗ್ರೆಸ್ ಜನರಿಗೆ ಟೋಪಿ ಹಾಕುತ್ತಾ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದರು.












Click it and Unblock the Notifications