• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಿದ ರಾಹುಲ್‌ ಗಾಂಧಿ

|
Google Oneindia Kannada News

ಬಳ್ಳಾರಿ, ಅಕ್ಟೋಬರ್ 17: ದೇಶದ ರಾಜಕೀಯ ವಲಯದಲ್ಲಿ ಎಐಸಿಸಿ ಅಧ್ಯಕ್ಷೀಯ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಭಾರತ್‌ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸೋಮವಾರ ಬಳ್ಳಾರಿಯಲ್ಲಿ ತಮ್ಮ ಮತ ಚಲಾಯಿಸಿದ್ದರು.

ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ ಇಂದು ಆರಂಭವಾಗಿದೆ. ದೆಹಲಿಯ ಎಐಸಿಸಿ ಕಚೇರಿ ಸೇರಿದಂತೆ ಒಟ್ಟು 65 ಮತ ಕೇಂದ್ರಗಳಲ್ಲಿ ಮತದಾನ ನಡೆಯುತ್ತಿದೆ. ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಪ್ರಸ್ತುತ ಬಳ್ಳಾರಿಯಲ್ಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಸಂಗನಕಲ್ಲು ವಿಶ್ರಾಂತಿ ತಾಣದಲ್ಲಿ ವ್ಯವಸ್ಥೆ ಮಾಡಿರುವ ವಿಶೇಷ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ಮತ ಚಲಾಯಿಸಿದರು.

Congress President Election: ಎಐಸಿಸಿ ಕಚೇರಿಯಲ್ಲಿ ಸೋನಿಯಾ, ಪ್ರಿಯಾಂಕಾ ಮತದಾನCongress President Election: ಎಐಸಿಸಿ ಕಚೇರಿಯಲ್ಲಿ ಸೋನಿಯಾ, ಪ್ರಿಯಾಂಕಾ ಮತದಾನ

22 ವರ್ಷಗಳ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಶಶಿ ತರೂರ್‌ ಸ್ಪರ್ಧಿಸಿದ್ದಾರೆ. ಮತದಾನ ಹಿನ್ನೆಲೆಯಲ್ಲಿ ಪಾದಯಾತ್ರೆ ಮೊಟಕುಗೊಳಿಸಲು ಸಾಧ್ಯವಿಲ್ಲದ ಕಾರಣ, ರಾಹುಲ್ ಗಾಂಧಿ ಹಾಗೂ ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗಿರುವ 40 ಮಂದಿ ಸದಸ್ಯರಿಗೆ ಸಂಗನಕಲ್ಲು ವಿಶ್ರಾಂತಿ ತಾಣದಲ್ಲೇ ವಿಶೇಷ ಮತಗಟ್ಟೆ ವ್ಯವಸ್ಥೆ ಮಾಡಲಾಗಿತ್ತು.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಒಟ್ಟಾರೆ 9 ಸಾವಿರಕ್ಕೂ ಅಧಿಕ ಮಂದಿ ಎಐಸಿಸಿ ಪ್ರತಿನಿಧಿಗಳು ಮತ ಚಲಾಯಿಸುವ ಹಕ್ಕು ಹೊಂದಿದ್ದು, ಕರ್ನಾಟಕದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಒಟ್ಟು 494 ಮಂದಿ ಈ ಚುನಾವಣೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

ಜೀನ್ಸ್ ಕಾರ್ಮಿಕರ ಮೆನೆಗೆ ಭೇಟಿ

ಬಳ್ಳಾರಿಯ ಕೌಲ್ ಬಜಾರ್ 30ನೇ ವಾರ್ಡ್‌ನಲ್ಲಿರುವ ಹಜರತ್ ಇರ್ಷಾದ್ ಅಲಿ ಬಾಬಾ ದರ್ಗಾಗೆ ರಾಹುಲ್ ಗಾಂಧಿ ಭೇಟಿ ನೀಡಿದರು. ತದನಂತರ ದರ್ಗಾ ಬಳಿಯಿರುವ ಜೀನ್ಸ್ ಕಾರ್ಮಿಕ ಕುಟುಂಬಸ್ಥರ ಮನೆಗೆ ತೆರಳಿ ಉದ್ಯಮದ ಕಷ್ಟ ನಷ್ಟ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

Congress Leader Rahul Gandhi casts his vote at Sanganakallu booth near Ballari

ಈ ಸಂದರ್ಭದಲ್ಲಿ ಶಾಸಕ ಬಿ.ನಾಗೇಂದ್ರ ಜೊತೆಯಲ್ಲಿದ್ದು ಜೀನ್ಸ್ ಉದ್ಯಮ ಹಾಗೂ ಅದನ್ನು ನಂಬಿ ಬದುಕುತ್ತಿರುವ ಕಾರ್ಮಿಕರ ಸಮಸ್ಯೆ ಬಗ್ಗೆ ರಾಹುಲ್ ಗಾಂಧಿಯವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ರಾಹುಲ್ ಗಾಂಧಿಯವರನ್ನು ಬೇಟಿ ಮಾಡಲು ಮುಗಿಬಿದ್ದರು. ಬಹುತೇಕ ಎಲ್ಲರಿಗೂ ಹಸ್ತಲಾಘವ ಮಾಡಿದ ರಾಹುಲ್, ಸೆಲ್ಪಿ ತೆಗೆದುಕೊಳ್ಳಲು ಸಹಕರಿಸಿದರು.

ರಾಹುಲ ಗಾಂಧಿ
Know all about
ರಾಹುಲ ಗಾಂಧಿ

English summary
Congress leader Rahul Gandhi who has been leading the Bharat Jodo yatra from Kanyakumari to Kashmir for the last one month, cast his vote in the AICC presidential election at Sanganakallu on the outskirts of Ballari district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X