ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಚಿತ್ರಗಳು

ಬಳ್ಳಾರಿ, ಆ.23 : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿಯೂ ಆಶ್ವರ್ಯ ಉಂಟುಮಾಡಿದೆ. 33,104 ಮತಗಳ ಅಂತರದಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ನಾಯಕರು ನಿರೀಕ್ಷೆ ಮಾಡಿರಲಿಲ್ಲ. ರೆಡ್ಡಿಗಳ ಕೋಟೆಯನ್ನು ಛಿದ್ರ ಮಾಡಿರುವ ಕಾಂಗ್ರೆಸ್ ನಾಯಕರು ಗೆಲುವಿನ ಸಂಭ್ರಮದಲ್ಲಿ ಮುಳಗಿದ್ದಾರೆ.

ಸೋಮವಾರ ಪ್ರಕಟಗೊಂಡ ಉಪ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲಕೃಷ್ಣ ಅವರು 33,104 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಸಂಸದ ಬಿ.ಶ್ರೀರಾಮುಲು ಅವರ ಪರಮಾಪ್ತ ಓಬಳೇಶ್ ಅವರಿಗೆ ಸೋಲುಣಿಸಿದ್ದಾರೆ. ಇದರ ಹಿಂದೆ ಇಂಧನ ಸಚಿವ ಮತ್ತು ಬಳ್ಳಾರಿಯ ಚುನಾವಣೆ ಉಸ್ತುವಾರಿ ವಹಿಸಿದ್ದ ಡಿ.ಕೆ.ಶಿವಕುಮಾರ್ ಅವರ ಕಾರ್ಯಕತಂತ್ರವೂ ಕೆಲಸ ಮಾಡಿದೆ ಎಂಬ ಮಾತನ್ನು ಎಲ್ಲರೂ ಒಪ್ಪಬೇಕು. [ಬಳ್ಳಾರಿಯಲ್ಲಿ ಕೈಹಿಡಿದ ಮತದಾರರು]

ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಉಪ ಚುನಾವಣೆ ಟಿಕೆಟ್ ನೀಡಿದ ನಂತರ ಬಳ್ಳಾರಿ ಕ್ರಾಂಗ್ರೆಸ್‌ನಲ್ಲಿ ಬಂಡಾಯವೆದ್ದಿತ್ತು. ಆದರೆ, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿವಹಿಸಿಕೊಂಡ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ನಾಯಕರನ್ನು ಒಟ್ಟಾಗಿ ಸೇರಿಸಿ ರೆಡ್ಡಿಗಳ ಭದ್ರಕೋಟೆಯನ್ನು ಛಿದ್ರಮಾಡಿ, ಪಕ್ಷಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಭ್ರಮದ ಚಿತ್ರಗಳು

ಬಳ್ಳಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್‌ಗೆ ಗೆಲುವು

ಬಳ್ಳಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್‌ಗೆ ಗೆಲುವು

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರು ಜಯಗಳಿಸಿದ್ದಾರೆ. ಈ ಮೂಲಕ ರೆಡ್ಡಿಗಳ ಕೋಟೆಯ ಮೇಲೆ ಕಾಂಗ್ರೆಸ್ ಬಾವುಟ ಹಾರಿಸಿದ್ದಾರೆ.

ಮೊದಲಿನಿಂದಲೂ ಮುನ್ನಡೆ

ಮೊದಲಿನಿಂದಲೂ ಮುನ್ನಡೆ

ಮತ ಎಣಿಕೆ ಆರಂಭವಾದಾಗಿನಿಂದ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದಕೊಂಡ ಎನ್.ವೈ.ಗೋಪಾಲಕೃಷ್ಣ ಅವರು 4 ಸುತ್ತಿನ ಮತ ಎಣಿಕೆ ನಡೆಯುವ ವೇಳೆಗೆ 8,458 ಮತಗಳ ಮುನ್ನಡೆ ಪಡೆದುಕೊಂಡಿದ್ದರು. ನಂತರ ಅವರ ಮತಗಳ ಅಂತರ ಹೆಚ್ಚಾಗುತ್ತಾ ಹೋಯಿತು. ಅಂತಿಮವಾಗಿ 33,104 ಮತಗಳ ಅಂತರದಿಂದ ಅವರು ಗೆಲುವಿನ ನಗೆ ಬೀರಿದರು.

ಬಿಜೆಪಿಗೆ ಮುಖಭಂಗ

ಬಿಜೆಪಿಗೆ ಮುಖಭಂಗ

ತಮ್ಮ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಬಿ.ಶ್ರೀರಾಮುಲು ಅವರು ತಮ್ಮ ಪರಮಾಪ್ತ ಓಬಳೇಶ್ ಅವರನ್ನು ಕಣಕ್ಕೆ ಇಳಿಸಿದ್ದರು. ಆದರೆ, ಅವರು ಜನರ ಬೆಂಬಲಗಳಿಸುವಲ್ಲಿ ವಿಫಲರಾದರು. 50,795 ಮತಗಳನ್ನು ಪಡೆದ ಓಬಳೇಶ್ ಅವರು ಸೋಲೊಪ್ಪಿಕೊಂಡರು.

ಡಿಕೆ ಶಿವಕುಮಾರ್ ಕಾರ್ಯತಂತ್ರ

ಡಿಕೆ ಶಿವಕುಮಾರ್ ಕಾರ್ಯತಂತ್ರ

ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲುವಿನ ಹಿಂದಿನ ಶಕ್ತಿ ಇಂಧನ ಸಚಿವ ಡಿ.ಕೆ.ಶಿವಕುಮಾರ್. ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಸಚಿವರು, ಪ್ರಚಾರ ಕಾರ್ಯಮುಗಿಯವ ತನಕ ಕ್ಷೇತ್ರದಲ್ಲಿದ್ದುಕೊಂಡು, ಎಲ್ಲಾ ನಾಯಕರನ್ನು ಒಗ್ಗೂಡಿಸಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಿದ್ದಾರೆ.

ನಾಯಕರಿಗೆ ಅನಿರೀಕ್ಷಿತ ಗೆಲುವು

ನಾಯಕರಿಗೆ ಅನಿರೀಕ್ಷಿತ ಗೆಲುವು

10 ರಿಂದ 15 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಬಹುದು ಎಂದು ಅಂದಾಜಿಸಿದ್ದೆವು. ಆದರೆ, 33,104 ಮತಗಳ ಅಂತರ ನಿರೀಕ್ಷೆ ಮಾಡಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+