• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಿಂದಾಲ್ ನೇತೃತ್ವದಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ

|

ಬಳ್ಳಾರಿ, ಮೇ 7: ಜಿಂದಾಲ್ ಕಾರ್ಖಾನೆ ನೇತೃತ್ವದಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆಯು ಇನ್ನು 15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. 265 ಹಾಸಿಗೆಯುಳ್ಳ ಒಂದು ಘಟಕ ಇನ್ನು ಎರಡು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.

ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

265 ಹಾಸಿಗೆಯುಳ್ಳ ಒಂದು ಘಟಕ ಇನ್ನು ಎರಡು ದಿನಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಇದರ ಜೊತೆಗೆ ಇನ್ನು 15 ದಿನಗಳಲ್ಲಿ ಸಂಪೂರ್ಣ ಆಸ್ಪತ್ರೆ ಜನರ ಉಪಯೋಗಕ್ಕೆ ಬರಲಿದೆ. ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಗಾಗಿ ಜನರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬಳ್ಳಾರಿಯಲ್ಲಿ ನಿರ್ಮಾಣವಾಗುತ್ತಿರುವ ಸಾವಿರ ಬೆಡ್ ಗಳ ಆಸ್ಪತ್ರೆಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ರಾಯಚೂರು, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಿಗೂ ಅನುಕೂಲವಾಗಲಿದೆ ಎಂದರು.

ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಯ ಜನರು ಬೆಡ್ ಸಿಗುತ್ತಿಲ್ಲ ಎಂದು ಯಾವುದೇ ರೀತಿಯ ಆತಂಕ ಪಡುವ ಅವಶ್ಯಕತೆಯಿಲ್ಲ. ಎಲ್ಲಾ ರೀತಿಯ ಸಮಸ್ಯೆಗಳಿಗೆ ಆಸ್ಪತ್ರೆ ಸಹಾಯವಾಗಲಿದೆ. ಜಿಲ್ಲಾಡಳಿತ ಮತ್ತು ಜಿಂದಾಲ್ ಕಂಪನಿಯ ಈ ಒಂದು ಕಾರ್ಯ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.

ಮೂಲಭೂತ ಸೌಕರ್ಯ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಮಾತನಾಡಿ, ರಾಜ್ಯದಲ್ಲಿ ಆಕ್ಸಿಜನ್ ಹಾಸಿಗೆಯಿಲ್ಲದೆ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಇಂತಹ ಸಮಯದಲ್ಲಿ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣ ಮಾಡಲು ಹೊರಟಿರುವ ಜಿಂದಾಲ್ ಕಂಪನಿಗೆ ತುಂಬಾ ಧನ್ಯವಾದಗಳು ಎಂದು ಹೇಳಿದರು.

ಬಳ್ಳಾರಿ ಜಿಲ್ಲಾಡಳಿತದ ಸಹಕಾರದೊಂದಿಗೆ ಜಿಂದಾಲ್ ಸಂಸ್ಥೆ ಜಿಲ್ಲೆಯ ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸಕ್ಕೆ ಮಾಡುವ ಒಂದೊಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.

ಆಕ್ಸಿಜನ್ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಿಂದಾಲ್ ಸಂಸ್ಥೆಯ ಸಮೀಪವೇ ಈ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಎಲ್ಲಾ ರೀತಿಯ ಸಂಪೂರ್ಣವಾದ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲಾ ಅದಾವತ್ ಸೇರಿದಂತೆ ಜಿಂದಾಲ್ ಕಾರ್ಖಾನೆಯ ಅಧಿಕಾರಿಗಳು ಮತ್ತು ಇತರರು ಇದ್ದರು.

English summary
A temporary hospital with a 1 thousand oxygen bed, headed by the Jindal factory, will be operational in 15 days, Social Welfare Minister B. Sriramulu said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X