ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣಿ ಜಿಲ್ಲೆಯಲ್ಲಿ 500 ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 23: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 39 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 509ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 39 ಮಂದಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಈ ಪೈಕಿ 17 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ.‌ ಈವರೆಗೂ 289 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರ ಪ್ರಾಥಮಿಕ ಹಾಗೂ ದ್ವಿತೀಯ ‌ಸಂಪರ್ಕ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತ ಪಡಿಸಿವೆ.

Coronavirus Cases Crossed 500 And 2 Deaths Reported In Ballari Today

 ಬಳ್ಳಾರಿ: ಜಿಂದಾಲ್ ನೌಕರರ ಕುಟುಂಬಕ್ಕೆ ಕಂಟಕವಾದ ಕೊರೊನಾ ವೈರಸ್ ಬಳ್ಳಾರಿ: ಜಿಂದಾಲ್ ನೌಕರರ ಕುಟುಂಬಕ್ಕೆ ಕಂಟಕವಾದ ಕೊರೊನಾ ವೈರಸ್

ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 509ಕ್ಕೆ ಏರಿಕೆಯಾಗಿದ್ದು, 145 ಮಂದಿ ಗುಣಮುಖರಾಗಿದ್ದಾರೆ. ಐದು ಜನ ಸಾವನ್ನಪ್ಪಿದ್ದಾರೆ. 359 ಸಕ್ರಿಯ ಪ್ರಕರಣಗಳಿವೆ. ಜೊತೆಗೆ ನಿನ್ನೆಯಷ್ಟೇ ಜಿಲ್ಲೆಯಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇಂದು ಕೂಡ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿಯ ನಿವಾಸಿ 85 ವರ್ಷದ ವೃದ್ಧೆ ಹಾಗೂ 43 ವರ್ಷದ ಪುರುಷ ಇಂದು ಕೊರೊನಾ ವೈರಸ್ ಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 5ಕ್ಕೆ ಏರಿದೆ.

English summary
A total of 39 new cases of corona virus have been detected in Ballari district today, total cases in district has increased to 509
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X