• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಡಿನಾಡು ಬಳ್ಳಾರಿಯಲ್ಲಿ 20 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಆಗಸ್ಟ್ 29: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 20 ಸಾವಿರದ ಗಡಿ ಮೀರಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ನಿನ್ನೆಯೂ ಹೊಸ 586 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20163ಕ್ಕೆ ಆಗಿದ್ದು, ಈವರೆಗೂ 14755 ಮಂದಿ ಗುಣಮುಖರಾಗಿದ್ದಾರೆ. ಸದ್ಯ 5160 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾರದೊಳಗೆ ನಂಜನಗೂಡು ಟಿಎಚ್ಒ ಆತ್ಮಹತ್ಯೆ ಪ್ರಕರಣ ತನಿಖೆಗೆ ಆದೇಶ

ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಸಹ ಹೆಚ್ಚಳವಾಗುತ್ತಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿಗೆ 5 ಜನರು ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ಆದರೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿರುವುದು ಒಂದೆಡೆ ಸಮಾಧಾನ ತಂದಿದೆ. ಕಳೆದ ಒಂದು ವಾರದಲ್ಲಿ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ವ್ಯಾಪಕವಾಗಿ ಏರಿಕೆ ಆಗಿರುವುದು ಜನರಲ್ಲಿ ಕೊಂಚ ನೆಮ್ಮದಿ ತಂದಿದೆ.

English summary
Coronavirus numbers are increasing day by day in the Ballari district. So far, the number of infected people in the district has exceeded 20 thousand,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X