ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಆಗಸ್ಟ್‌ 01: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯೊಬ್ಬರು ಇಂದು ಅವಳಿ- ಜವಳಿ ಮಕ್ಕಳಿಗೆ ಜನ್ಮ ನೀಡಿ ಗಮನ ಸೆಳೆದಿದ್ದಾರೆ.

ಬಳ್ಳಾರಿಯ ಡಾ.ರಾಜ್ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (ಕೋವಿಡ್ ಕೇರ್) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿಯವರ ನೇತೃತ್ವದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಬೆಳಿಗ್ಗೆ 8.35ರ ಸುಮಾರಿಗೆ ಅವಳಿ ಗಂಡು ಮತ್ತು ಹೆಣ್ಣು ಮಗು ಜನಿಸಿವೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕಿತೆಯಾಗಿದ್ದ ಗರ್ಭಿಣಿಯು ಈ ಮುನ್ನ ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಅವರಿಗೆ ಎಲ್ ಎಸ್ ಸಿಎಸ್ ತಂತ್ರಜ್ಞಾನದ ಮೂಲಕ ತುರ್ತು ಹೆರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೆಣ್ಣು ಮಗು-1.8 ಕೆ.ಜಿಯಿದ್ದು, ಗಂಡು ಮಗು- 2.5 ಕೆ.ಜಿ ತೂಕವಿದೆ. ಇದು ಅವರಿಗೆ ಮೊದಲನೇ ಹೆರಿಗೆಯಾಗಿದೆ.

<div class=

" title="
Coronavirus Infected Pregnant Gave Birth To Twins In Ballari
" />
Coronavirus Infected Pregnant Gave Birth To Twins In Ballari

ಇಡೀ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಗರ್ಭಿಣಿಯೊಬ್ಬರು ಅವಳಿ- ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

English summary
A pregnant woman infected with coronavirus gave birth to twins in ballari. The pregnant undergone surgery at the District Government Hospital headed by surgeon Dr. N. Basareddy,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X