ವೈರಲ್ ಆಯ್ತು ಬಳ್ಳಾರಿಯಲ್ಲಿ ಕೊರೊನಾ ಸೋಂಕಿತರ ಶವಸಂಸ್ಕಾರದ ವಿಡಿಯೋ

ಬಳ್ಳಾರಿ, ಜೂನ್ 30: ಕೊರೊನಾ ವೈರಸ್ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿವೆ. ಬಳ್ಳಾರಿಯಲ್ಲಿ ಕೊರೊನಾ ವೈರಸ್ ಸೋಂಕಿತರು ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ಸೋಂಕಿನಿಂದ ಎಂಟು ಮಂದಿ ಮೃತಪಟ್ಟ ವರದಿಯಾಗಿತ್ತು. ಇದೀಗ ಬಳ್ಳಾರಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ನಡೆಸಿದ ರೀತಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

Recommended Video

      ಮುಂಬೈ, ದೆಹಲಿ ತೋರಿಸಿ 'ಚಂದಮಾಮ' ಕಥೆ ಹೇಳುತ್ತಿರುವ ಯಡಿಯೂರಪ್ಪ | Yediyurappa | Karnataka | Oneindia Kannada

      ಬಳ್ಳಾರಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಒಂದಾದ ಮೇಲೆ ಒಂದರಂತೆ ಗುಂಡಿಗೆ ಬಿಸಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

       ಸೋಮವಾರ ಒಂದೇ ದಿನ 8 ಮಂದಿ ಸಾವು

      ಸೋಮವಾರ ಒಂದೇ ದಿನ 8 ಮಂದಿ ಸಾವು

      ಬಳ್ಳಾರಿಯಲ್ಲಿ ಸೋಮವಾರ ಒಂದೇ ದಿನ 8 ಮಂದಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಒಂದೇ ಜಾಗದಲ್ಲಿ ಶವ ಸಂಸ್ಕಾರ ಮಾಡಲು ಸೂಚಿಸಿದೆ. ಆದರೆ ಶವ ಸಂಸ್ಕಾರ ನಡೆಸಿದ ರೀತಿ ಇದೀಗ ಚರ್ಚೆಗೆ ಕಾರಣವಾಗಿದೆ.

       ಒಂದೇ ಜಾಗದಲ್ಲಿ ಶವಸಂಸ್ಕಾರ ಮಾಡಲು ಸೂಚಿಸಿದ್ದ ಇಲಾಖೆ

      ಒಂದೇ ಜಾಗದಲ್ಲಿ ಶವಸಂಸ್ಕಾರ ಮಾಡಲು ಸೂಚಿಸಿದ್ದ ಇಲಾಖೆ

      ಹೆಚ್ಚು ಜನರು ಸಾವನ್ನಪ್ಪಿದ್ದರಿಂದ ಒಂದೇ ಜಾಗದಲ್ಲಿ ಶವ ಸಂಸ್ಕಾರ ನಡೆಸಲು ಆರೋಗ್ಯ ಇಲಾಖೆ ಸೂಚಿಸಿತ್ತು. ಬಳ್ಳಾರಿಯ ಹೊರವಲಯದಲ್ಲಿ ಶವ ಸಂಸ್ಕಾರ ಮಾಡಲು ಜಾಗ ನಿಗದಿ ಮಾಡಲಾಗಿತ್ತು. ಆದರೆ ಒಂದೇ ಗುಂಡಿಗೆ ಹೆಣಗಳನ್ನು ಬಿಸಾಡಲಾಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರು ಆತಂಕಗೊಂಡಿದ್ದಾರೆ.

      ಶವ ಸಂಸ್ಕಾರದ ವಿಡಿಯೋ ವೈರಲ್

      ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಹೀಗೆ ಬಿಸಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮಾನವೀಯವಾಗಿ ಹೀಗೆ ಹೆಣಗಳನ್ನು ಬಿಸಾಡಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಕುರಿತು ವ್ಯಾಪಕ ಖಂಡನೆಯೂ ವ್ಯಕ್ತವಾಗಿದೆ.

       ಬಳ್ಳಾರಿಯಲ್ಲಿ ಹೆಚ್ಚಿದ ಆತಂಕ

      ಬಳ್ಳಾರಿಯಲ್ಲಿ ಹೆಚ್ಚಿದ ಆತಂಕ

      ಬಳ್ಳಾರಿಯಲ್ಲಿ ದಿನೇ ದಿನೇ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಜೊತೆಗೆ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆಯೂ ಹೆಚ್ಚುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಇಂದು ಮತ್ತೆ ಐದು ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 28ಕ್ಕೆ ಏರಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+