• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಮಾಜಿ ಶಾಸಕ, ವಿವಾಹದಲ್ಲಿ ಭಾಗಿ

By ಬಳ್ಳಾರಿ ಪ್ರತಿನಿಧಿ
|

ವಿಜಯನಗರ, ಮೇ 17; ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ನಿಯಮಗಳನ್ನು ಪಾಲನೆ ಮಾಡುವಂತೆ ಜನ ಪ್ರತಿನಿಧಿಗಳು ನೋಡಿಕೊಳ್ಳಬೇಕು. ಆದರೆ ಅವರೇ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರಾ? ಎಂಬ ಪ್ರಶ್ನೆ ಕಾಡುತ್ತಿದೆ.

ವಿಜಯನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಮದುವೆ ಸೇರಿದಂತೆ ಇನ್ನಿತರ ಶುಭ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ಅವಳಿ ಜಿಲ್ಲೆಗಳಾದ ಬಳ್ಳಾರಿ ಮತ್ತು ವಿಜಯನಗರದಲ್ಲಿ ಈ ಆದೇಶ ಜಾರಿಯಲ್ಲಿದೆ.

ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!ದಕ್ಷಿಣ ಕನ್ನಡ; ವಾರಾಂತ್ಯದ ಕರ್ಫ್ಯೂ ನಡುವೆಯೂ 372 ವಿವಾಹ!

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮದುವೆ ಸಮಾರಂಭಗಳಿಗೆ ಅನುಮತಿಯನ್ನು ನೀಡುತ್ತಿಲ್ಲ. ಈಗಾಗಲೇ ನಿಗದಿಯಾಗಿರುವ ವಿವಾಹಗಳು ಮಾತ್ರ ನಡೆಯುತ್ತಿದೆ.

ಅಕ್ಕ-ತಂಗಿಯನ್ನು ವಿವಾಹವಾಗಿದ್ದ ಉಮಾಪತಿ ಈಗ ಪೊಲೀಸರ ಅತಿಥಿ!ಅಕ್ಕ-ತಂಗಿಯನ್ನು ವಿವಾಹವಾಗಿದ್ದ ಉಮಾಪತಿ ಈಗ ಪೊಲೀಸರ ಅತಿಥಿ!

ಜಿಲ್ಲಾಡಳಿತದ ಆದೇಶಕ್ಕೆ ಬೆಲೆ ಕೊಡದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ನೇಮಿರಾಜ್ ನಾಯ್ಕ್‌ ತಾಲೂಕಿನ ಮರಿಯಮ್ಮನಹಳ್ಳಿ ತಾಂಡದ ತಮ್ಮ ಸ್ವಂತ ಊರಿನಲ್ಲಿ ತಮ್ಮನ ಮಗಳ ಮದುವೆಯಲ್ಲಿ ಭಾಗಿಯಾಗಿದ್ದಾರೆ.

ವಿಜಯನಗರ; ಬಾಯಿ ಬಡಿದು ಕೊಂಡ್ರು ಬಾಯಿ ತುಂಬಾ ನೀರು ಸಿಗಲ್ಲ! ವಿಜಯನಗರ; ಬಾಯಿ ಬಡಿದು ಕೊಂಡ್ರು ಬಾಯಿ ತುಂಬಾ ನೀರು ಸಿಗಲ್ಲ!

ಹೊಸಪೇಟೆ ತಾಲೂಕಿನ ನಾನಾ ಕಡೆ ಮದುವೆಗೆ ಕೊಟ್ಟಿದ್ದ ಅನುಮತಿಯನ್ನು ರದ್ದು ಮಾಡಲಾಗಿದೆ. ಸರಳವಾಗಿ ನಡೆಯುವ ವಿವಾಹವನ್ನು ರದ್ದುಗೊಳಿಸಿ ಎಂದು ಜಿಲ್ಲಾಡಳಿತ ಹೇಳಿದೆ. ಆದರೂ ಸಹ ಮದುವೆ ಮಾಡಲಾಗಿದೆ. ಜನರು ಸಹ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಮೇ 16ರ ವರದಿಯಂತೆ ಬಳ್ಳಾರಿ ಜಿಲ್ಲೆಯಲ್ಲಿ 1729 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 26 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 18342.

English summary
Hagaribommanahalli former MLA Nemiraj Naik took part in the family marriage function. Ballari district administration cancelled marriage function's.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X