ಕೊರೊನಾ ರೋಗಿಗಳ ಶವಸಂಸ್ಕಾರ ವಿಡಿಯೋ; ತನಿಖೆಗೆ ಬಳ್ಳಾರಿ ಡಿಸಿ ಆದೇಶ

ಬಳ್ಳಾರಿ, ಜೂನ್ 30: ಬಳ್ಳಾರಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಶವಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ.

Recommended Video

      Siddaramaiah questioned to CM BSY |ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್ | Oneindia Kannada

      ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಂದಾಗಿ ಎಂಟು ಜನರು‌ ಮೃತಪಟ್ಟಿದ್ದರು. ಹೆಚ್ಚು ಜನರು ಸಾವನ್ನಪ್ಪಿದ್ದರಿಂದ ಒಂದೇ ಜಾಗದಲ್ಲಿ ಶವ ಸಂಸ್ಕಾರ ನಡೆಸಲು ಆರೋಗ್ಯ ಇಲಾಖೆ ಸೂಚಿಸಿತ್ತು. ಬಳ್ಳಾರಿಯ ಹೊರವಲಯದಲ್ಲಿ ಶವ ಸಂಸ್ಕಾರ ಮಾಡಲು ಜಾಗ ನಿಗದಿ ಮಾಡಲಾಗಿತ್ತು. ಆದರೆ ಒಂದೇ ಗುಂಡಿಗೆ ಹೆಣಗಳನ್ನು ಬಿಸಾಡಲಾಗಿತ್ತು. ಈ ರೀತಿ ಶವಸಂಸ್ಕಾರ ಮಾಡಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಮಾಧ್ಯಮಗಳ ವರದಿ ಹಿನ್ನೆಲೆ ಜಿಲ್ಲಾಧಿಕಾರಿ ನಕುಲ್ ತನಿಖೆಗೆ ಆದೇಶಿಸಿದ್ದಾರೆ.

      Ballari Dc Nakul Ordered To Investigate coronavirus patients funeral incident

      ಬಳ್ಳಾರಿಯಲ್ಲಿ ಕೊರೊನಾ ಸೋಂಕಿನಿಂದಾಗಿ ಇಂದು ಕೂಡ ಐವರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಎಂಟು ಜನರು ಮೃತಪಟ್ಟಿದ್ದರು. ಜಿಲ್ಲೆಯಲ್ಲಿ ಇದೀಗ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ ಏರಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+