ಕೊರೊನಾ ವೈರಸ್; ಬಳ್ಳಾರಿ ಡಿಸಿ ಕಚೇರಿ ಕ್ಲೋಸ್
ಬಳ್ಳಾರಿ, ಜುಲೈ 17: ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮಿತಿ ಮೀರುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ 133 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2200ಕ್ಕೆ ಏರಿದೆ.
Recommended Video
Bengaluru Lockdown ಮುಂದಿನ ವಾರವೂ ಇರುತ್ತಾ ? | Oneindia Kannada
ಇಂದು 41 ಮಂದಿ ಕೊರೊನಾ ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 939 ಸಕ್ರಿಯ ಪ್ರಕರಣಗಳಿದ್ದು, 1207 ಮಂದಿ ಗುಣಮುಖರಾಗಿದ್ದಾರೆ. 54 ಮಂದಿ ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಮಾಹಿತಿ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಗೂ ಕೊರೊನಾ ವೈರಸ್ ಕಾಲಿಟ್ಟಿದೆ. ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪಾಸಿಟಿವ್ ಬಂದ ಸಿಬ್ಬಂದಿಯ ಸಂಪರ್ಕದಲ್ಲಿದ್ದವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸೋಮವಾರದವರೆಗೂ ಕಚೇರಿಯನ್ನು ಮುಚ್ಚಲಾಗಿದೆ.












Click it and Unblock the Notifications