ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತರ್ ರಾಜ್ಯದಿಂದ ಬಳ್ಳಾರಿಗೆ ಬಂದರೆ ಕಡ್ಡಾಯ ಕ್ವಾರಂಟೈನ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಮೇ 06: ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿ ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಯಾರೇ ಬಂದರೂ ಅಂತಹವರನ್ನು 14 ದಿನಗಳ ಕಾಲ ಇನ್ ಸ್ಟಿಟ್ಯೂಟ್ ಕ್ವಾರೆಂಟೈನ್ ಇಡುವುದು ಕಡ್ಡಾಯ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ಮಾಡಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಗೆ ಬರುವವರು ಅಲ್ಲಿನ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಆಂಬ್ಯುಲೆನ್ಸ್ ನಲ್ಲಿ ಮಾತ್ರ ಬರುವವರಿಗೆ ಅವಕಾಶ ನೀಡಲಾಗುವುದು. ಅದನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಜಿಲ್ಲೆಗೆ ಬಂದರೆ ಅಂತಹವರನ್ನು 14 ದಿನಗಳ ಕಾಲ ಇನ್ ಸ್ಟಿಟ್ಯೂಟ್ ಕ್ವಾರೆಂಟೈನ್ ನಲ್ಲಿ ಇಡಲೇಬೇಕು ಎಂದು ಸ್ಪಷ್ಟಪಡಿಸಿದರು.

Compulsory Quarantine For Those Who Come From Other State To Ballari

ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ನೆರೆ ರಾಜ್ಯದಿಂದ ಜನರು ನುಸುಳದಂತೆ ತೀವ್ರ ನಿಗಾ ವಹಿಸಲಾಗಿದ್ದು, ಮುಖ್ಯ ರಸ್ತೆ ಬಿಟ್ಟು ಕಾಲು ದಾರಿ, ಹೊಲಗಳ ಮೂಲಕ ಬರುವವರ ಮೇಲೂ ಕಣ್ಣಿಡಲಾಗಿದೆ.

ಅಂತರ ಜಿಲ್ಲಾ ಪ್ರಯಾಣಕ್ಕೆ ಪಾಸು; ಪೊಲೀಸರ ಮಹತ್ವದ ಆದೇಶಅಂತರ ಜಿಲ್ಲಾ ಪ್ರಯಾಣಕ್ಕೆ ಪಾಸು; ಪೊಲೀಸರ ಮಹತ್ವದ ಆದೇಶ

ಆಂಧ್ರದೊಂದಿಗೆ ಗಡಿ ಸಂಪರ್ಕ ಹೊಂದಿರುವ ಸಂಡೂರು, ಬಳ್ಳಾರಿ ಮತ್ತು ಸಿರಗುಪ್ಪದ 65 ಹಳ್ಳಿಗಳಲ್ಲಿ ಪ್ರತಿನಿತ್ಯ ಮೂರು ಗಸ್ತುವಾಹನಗಳು ನಿರಂತರವಾಗಿ ಸಂಚರಿಸುತ್ತಿವೆ. ಜನರು ನುಸುಳದಂತೆ ನಿಗಾವಹಿಸುವ ನಿಟ್ಟಿನಲ್ಲಿ ಈಗಾಗಲೇ ಪ್ರತಿ ತಾಲೂಕಿಗೆ ಒಬ್ಬರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

English summary
Institute quarantine is compulsory for those who come from other states clarified ballari dc nakul
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X