ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಜಿಲ್ಲೆಯಲ್ಲಿ ವಾರದ ನಂತರ ಲಾಕ್ ಡೌನ್ ನಿರ್ಧಾರ?

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜುಲೈ 18: ಬಳ್ಳಾರಿ ಜಿಲ್ಲೆಯಲ್ಲಿ ಸದ್ಯಕ್ಕೆ ನೋ ಲಾಕ್ ಡೌನ್. ಲಾಕ್ ಡೌನ್ ವಿಧಿಸಲಾಗಿರುವ ಜಿಲ್ಲೆಗಳಲ್ಲಿ ಆದ ಬದಲಾವಣೆಗಳನ್ನು ಪರಿಶೀಲಿಸಿ ನಮ್ಮ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರಬೇಕೇ ಬೇಡವೇ ಎಂದು ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ ಸಿಂಗ್.

Recommended Video

Twitter Hackers ಮಾಡಿದ್ದೇನು , ಕದ್ದಿದ್ದೆಷ್ಟು ? | Oneindia Kannada

ಇಂದು ಬಳ್ಳಾರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ಪ್ರಮಾಣ ಹರಡುವಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ವೈರಸ್; ಬಳ್ಳಾರಿ ಡಿಸಿ ಕಚೇರಿ ಕ್ಲೋಸ್ಕೊರೊನಾ ವೈರಸ್; ಬಳ್ಳಾರಿ ಡಿಸಿ ಕಚೇರಿ ಕ್ಲೋಸ್

Decision Will Be Taken After One Week In Ballari About Lockdown

ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಕಾಯ್ದು ಚರ್ಚಿಸಿ ತೀರ್ಮಾನಿಸಲಾಗುವುದು. ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರ ಚಿಕಿತ್ಸೆ ಒದಗಿಸಲು ಯಾವುದೇ ರೀತಿಯ ಸಮಸ್ಯೆ ಇಲ್ಲ. ಲಾಕ್ ಡೌನ್ ವಿಧಿಸಿದ ಸಂದರ್ಭದಲ್ಲಿ ಜನರು ಅನುಭವಿಸಿದ ಪಾಡು ಹೇಳತೀರದು. ಪ್ರತಿನಿತ್ಯ ದುಡಿದು ತಮ್ಮ ಜೀವನ ನಡೆಸುವ ಜನರನ್ನು ಲಾಕ್ ಡೌನ್ ಮಾಡಿ ಕಷ್ಟಕ್ಕೆ ತಳ್ಳಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

English summary
"No lock down in Ballari district. We will review the changes in the districts where the lockdown is imposed and after we will take decision" said district incharge minister anand singh,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X