ಕೊಟ್ಟೂರು ರಥೋತ್ಸವ 2024; ವಿಶೇಷ ರೈಲುಗಳಿಗೆ ಬೇಡಿಕೆ
ಬಳ್ಳಾರಿ, ಫೆಬ್ರವರಿ 07: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವದ ದಿನಾಂಕ ನಿಗದಿಯಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.
ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ವಿಶೇಷ ರೈಲುಗಳ ಸೇವೆ ನೀಡಬೇಕು ಎಂದು ಬೇಡಿಕೆ ಇಡಲಾಗಿದೆ. ಪ್ರತಿ ವರ್ಷ ರೈಲ್ವೆ ಇಲಾಖೆ ಜಾತ್ರೆಯ ಸಂದರ್ಭ ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲು ಓಡಿಸುತ್ತದೆ.

ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವ 4/3/2024ರಂದು ನಡೆಯಲಿದೆ. ಆದರೆ 29/2/2024 ರಿಂದ 10/3/2024ರ ತನಕ ರಥೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳಿವೆ. ನೂರಾರು ಭಕ್ತರು ಆಗಮಿಸುತ್ತಾರೆ.
ಯಾವ ಮಾರ್ಗದಲ್ಲಿ ರೈಲು ಸಂಚಾರ?; ಶ್ರೀ ಗುರುಬಸವೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ದಾವಣಗೆರೆ-ಕೊಟ್ಟೂರು-ಹೊಸಪೇಟೆ, ಹೊಸಪೇಟೆ-ಕೊಟ್ಟೂರು-ದಾವಣಗೆರೆ, ಕೊಟ್ಟೂರು-ದಾವಣಗೆರೆ -ಬೆಂಗಳೂರು ಮತ್ತು ಕೊಟ್ಟೂರು-ದಾವಣಗೆರೆ-ಹರಿಹರ-ಹಾವೇರಿ-ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಬೇಕು ಎಂದು ಬೇಡಿಕೆ ಇಡಲಾಗಿದೆ.
ಪ್ರತಿವರ್ಷ ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುತ್ತಾರೆ. ಪಾದಯಾತ್ರೆಯ ಮೂಲಕವೂ ಕೊಟ್ಟೂರು ಕ್ಷೇತ್ರಕ್ಕೆ ಸಾವಿರಾರು ಜನರು ಆಗಮಿಸುತ್ತಾರೆ. ಆದ್ದರಿಂದ ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು ಓಡಿಸಲು ಮನವಿ ಮಾಡಲಾಗಿದೆ.
ಶ್ರೀ ಗುರುಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮತ್ತು ಬೆಳ್ಳಿ ರಥೋತ್ಸವ ಎಂದೇ ಕೊಟ್ಟೂರು ಜಾತ್ರೆ ಪ್ರಸಿದ್ಧಿ ಪಡೆದಿದೆ. ಫೆಬ್ರವರಿ 29ರಂದು ಬೆಳ್ಳಿ ರಥದಲ್ಲಿ ನಾಗರ ವಾಹನೋತ್ಸವ, ಮಾರ್ಚ್ 1ರಂದು ಬೆಳ್ಳಿ ರಥದಲ್ಲಿ ನವಿಲು ವಾಹನೋತ್ಸವ, ಮಾರ್ಚ್ 2ರಂದು ಬೆಳ್ಳಿ ರಥದಲ್ಲಿ ಗಜವಾಹನೋತ್ಸವ, ಮಾರ್ಚ್ 3ರಂದು ಬೆಳ್ಳಿ ರಥದಲ್ಲಿ ವೃಷಭ ವಾಹನೋತ್ಸವ ನಡೆಯಲಿದೆ. ಮಾರ್ಚ್ 4ರಂದು ಶ್ರೀ ಸ್ವಾಮಿಯ ಮಹಾ ರಥೋತ್ಸವ ನಡೆಯುವುದು.
ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿಗೆ ಹರಕೆ ಹೊತ್ತವರು ಎಷ್ಟು ದೂರದಲ್ಲಿದ್ದರೂ ಸರಿ ಅಲ್ಲಿಂದ ಪಾದಯಾತ್ರೆ ಮೂಲಕ ಆಗಮಿಸಿ ಸ್ವಾಮಿಯ ದರ್ಶನ ಮಾಡುತ್ತಾರೆ. ಬಳ್ಳಾರಿ ಮಾತ್ರವಲ್ಲ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ.
ಹುಬ್ಬಳ್ಳಿ, ಗದಗ, ರಾಣೆಬೆನ್ನೂರು, ಶಿವಮೊಗ್ಗ, ಹಾಸನ, ಅರಸೀಕೆರೆ, ಬೆಂಗಳೂರು, ದಾವಣಗೆರೆ, ಮುಂಡರಗಿ, ಚಿತ್ರದುರ್ಗ, ಹೂವಿನಹಡಗಲಿ ಹೀಗೆ ವಿವಿಧ ಭಾಗಗಳಿಂದ ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿಗೆ ಹರಕೆ ಹೊತ್ತ ಭಕ್ತರು ಜಾತ್ರೆಯ ಸಂದರ್ಭದಲ್ಲಿ ಹರಕೆ ತೀರಿಸಲು ಬರುತ್ತಾರೆ.
ಪ್ರತಿ ವರ್ಷ ಜಾತ್ರೆಯ ಸಂದರ್ಭದಲ್ಲಿ ವಿಜಯನಗರ ಜಿಲ್ಲಾಡಳಿತ ಕೊಟ್ಟೂರು ಪಟ್ಟಣ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಆದೇಶಿಸುತ್ತದೆ.
ಕಾರ್ತಿಕೋತ್ಸವ ಮತ್ತು ರಥೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕೊಟ್ಟೂರು ಪಟ್ಟಣ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗುತ್ತದೆ.
ಕೊಪ್ಪಳದ ಗವಿ ಸಿದ್ದೇಶ್ವರ ಜಾತ್ರೆಗೆ ಲಕ್ಷಾಂತರ ಜನರು ಸೇರುತ್ತಾರೆ. ಈ ಜಾತ್ರೆಯ ಬಳಿಕ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆಯುವ ಗುರುಬಸವೇಶ್ವರ ಸ್ವಾಮಿ ಜಾತ್ರೆಗೆ ಸಹ ಲಕ್ಷಾಂತರ ಜನರು ಆಗಮಿಸುತ್ತಾರೆ.
-
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications