Get Updates
Get notified of breaking news, exclusive insights, and must-see stories!

ಬಳ್ಳಾರಿ: ಆಸ್ತಿ ವಿವಾದ, ದೇವಾಲಯದ ವಾರ್ಷಿಕ ಜಾತ್ರೆ ನಿಷೇಧ

ಬಳ್ಳಾರಿ, ಏಪ್ರಿಲ್ 02: ದೇವಾಲಯದ ವಿಚಾರದಲ್ಲಿ ಗ್ರಾಮದಲ್ಲಿ ಘರ್ಷಣೆಗಳು ನಡೆಯುವುದನ್ನು ನೋಡಿದ್ದೇವೆ. ಆದರೆ ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಶಾಂತಿ ಕಾಪಾಡಲು ದೇವಾಲಯದ ವಾರ್ಷಿಕ ಜಾತ್ರೆಯನ್ನು ನಿಷೇಧಿಸಲಾಗಿದೆ. ಅಲ್ಲದೇ ಹೊಸ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಯನ್ನು ಧಾರವಾಡ ಹೈಕೋರ್ಟ್ ಪೀಠದ ಆದೇಶದಂತೆ ತೆರವುಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಏಪ್ರಿಲ್ 4ರಂದು ನಡೆಯುವ ಶ್ರೀ ಸದ್ಗುರು ಯಾಯರಿತಾತನವರ ವಾರ್ಷಿಕ ಜಾತ್ರೆ/ ರಥೋತ್ಸವವನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ನಿಷೇಧಿಸಿ ಬಳ್ಳಾರಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

Deputy Commissioner Bans Temple Chariot Festival

ಜಾತ್ರೆ ಏಕೆ ನಿಷೇಧ?: ಕೊಳಗಲ್ಲು ಗ್ರಾಮದಲ್ಲಿ ಶ್ರೀ ಸದ್ಗುರು ಯಾಯರಿತಾತನವರ ದೇವಾಲಯದ ಆಸ್ತಿ ಮತ್ತು ಆಡಳಿತ ವಿಚಾರವಾಗಿ ಗಲಾಟೆಗಳಾಗಿ ವಿವಾದ ಇರುತ್ತದೆ. 2024ರ ಫೆಬ್ರವರಿ 24ರಂದು ಬೆಳಗ್ಗೆ 4 ಗಂಟೆಗೆ ಶ್ರೀ ಸದ್ಗುರು ಯಾಯರಿತಾತನವರ ಮಠದ ಆವರಣದಲ್ಲಿ ಹೊಸದಾಗಿ ಕಟ್ಟಿರುವ ಎರಿಯಪ್ಪ ತಾತ ಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವಿಚಾರವಾಗಿ ಧಾರವಾಡದ ಕರ್ನಾಟಕ ಹೈಕೋರ್ಟ್‌ ಪೀಠ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ ಮೂರ್ತಿ ತೆರವುಗೊಳಿಸಿರುವುದರಿಂದ ಕೊಳಗಲ್ ಗ್ರಾಮದಲ್ಲಿ ಪರ-ವಿರೋಧ ಇರುವ ವಿವಿಧ ಸಮುದಾಯದವರ ಮಧ್ಯೆ ವೈಷಮ್ಯ ಉಂಟಾಗಿ 2024ರ ಏಪ್ರಿಲ್ 7ರಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಹಲ್ಲೆ ಮಾಡಿದ್ದು ಮತ್ತು ದೇವಾಲಯದ ಆಸ್ತಿ ಹಾಗೂ ಆಡಳಿತದ ವಿಚಾರವಾಗಿ ಗಲಾಟೆಗಳಾಗಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತವೆ.

ಶ್ರೀ ಯಾಯರಿತಾತನವರ ವಾರ್ಷಿಕ ಜಾತ್ರೆ/ ರಥೋತ್ಸವವು ಆಚರಣೆ ಮಾಡಿದಲ್ಲಿ ಸಾರ್ವಜನಿಕರ ಪ್ರಾಣ ಹಾನಿ, ಆಸ್ತಿ-ಪಾಸ್ತಿ ನಷ್ಟ ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಕೊಳಗಲ್ ಗ್ರಾಮದಲ್ಲಿ ಏಪ್ರಿಲ್ 4ರಂದು ನಡೆಯಬೇಕಿದ್ದ ಶ್ರೀ ಸದ್ಗುರು ಯಾಯರಿತಾತನವರ ವಾರ್ಷಿಕ ಜಾತ್ರೆ/ ರಥೋತ್ಸವವನ್ನು ಆಚರಣೆ ಮಾಡದಂತೆ ಆದೇಶಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರಂತೆ ಜಾತ್ರೆ ನಿಷೇಧಿಸಿ ಆದೇಶ ಹೊರಡಿಸಲು ಪೊಲೀಸರು ಕೋರಿದ್ದರು. ಅದರಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಾರ್ಚ್ 28ರಂದು ನಡೆದ ಸಭೆಯ ನಡವಳಿಗಳಲ್ಲಿ ಜಾತ್ರೆ ಆಚರಿಸಲು ಅನುಮತಿ ನೀಡಿದಲ್ಲಿ ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಚರ್ಚೆ ನಡೆದಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಸಹ ಕೊಳಗಲ್ ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಾತ್ರೆ/ ರಥೋತ್ಸವ ಆಚರಣೆ ಮಾಡದಂತೆ ನಿಷೇಧಿಸುವುದು ಸೂಕ್ತ ಎಂದು ತಿಳಿಸಿದ್ದರು.

ಆದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕೊಳಗಲ್ ಗ್ರಾಮದಲ್ಲಿ ನಡೆಯಬೇಕಿದ್ದ ಶ್ರೀ ಸದ್ಗುರು ಯಾಯರಿತಾತನವರ ವಾರ್ಷಿಕ ಜಾತ್ರೆ ನಿಷೇಧಿಸಿ ಆದೇಶಿಸಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

144 ಸೆಕ್ಷನ್ ಜಾರಿಯಾಗಿತ್ತು: ಏಪ್ರಿಲ್ 7ರಂದು ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಘರ್ಷಣೆ ನಡೆದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಆದ್ದರಿಂದ ಗ್ರಾಮದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು.

ವಿಗ್ರಹ ಪ್ರತಿಷ್ಠಾಪನೆ ವಿಚಾರದಲ್ಲಿ ಆರಂಭವಾದ ಜಗಳ ಬಳಿಕ ವಿಕೋಪಕ್ಕೆ ಹೋಗಿತ್ತು. ಪಿಎಸ್‌ಐ ಸೇರಿದಂತೆ 30ಕ್ಕೂ ಅಧಿಕ ಜನರು ಗಲಾಟೆಯಲ್ಲಿ ಗಾಯಗೊಂಡಿದ್ದರು. ಎಸ್‌ಸಿ ಸಮುದಾಯದವರು ಹೊಸದಾಗಿ ಕಟ್ಟಿರುವ ಎರಿಯಪ್ಪ ತಾತ ಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ಬಳಿಕ ಕುರುಬ ಸಮುದಾಯದವರು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುಂದಾಗಿದ್ದರು. ಆದ್ದರಿಂದ ಗ್ರಾಮದಲ್ಲಿ ಗಲಾಟೆ ನಡೆದಿತ್ತು.

ಮಠದ ಮೂಲ ಎರಿಯಪ್ಪ ಸ್ವಾಮಿ ಕುರುಬ ಸಮುದಾಯಕ್ಕೆ ಸೇರಿದವರು. ಹೊಸ ಗುಡಿಯಲ್ಲಿ ಹೇಗೆ ಎಸ್‌ಸಿ ಸಮುದಾಯದವರು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ನಾವು ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಕುರುಬ ಸಮುದಾಯದ ಜನರು ಆಕ್ರೋಶ ವ್ಯಕ್ತಪಡಿಸಿ, ಪಟ್ಟುಹಿಡಿದಿದ್ದರು.

ಈ ಸಂದರ್ಭದಲ್ಲಿ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಆಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಲು ಪ್ರಯತ್ನ ನಡೆಸಿದ್ದರು. ಕಲ್ಲು ತೂರಾಟ ನಡೆದಿತ್ತು, ಘಟನೆಯಲ್ಲಿ ಬಳ್ಳಾರಿ ಗ್ರಾಮೀಣ ಭಾಗದ ಸಿಪಿಐ ಸತೀಶ್, ಪಿಎಸ್‍ಐ ಸಂತೋಷ್, ಒಬ್ಬರು ಕಾನ್ಸ್‌ಟೇಬಲ್‌ ಗಾಯಗೊಂಡಿದ್ದರು.

ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಡಿಎಆರ್, ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಅಲ್ಲದೇ 150 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಎಸ್‌ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.

ಹಲವು ದಿನಗಳಿಂದ ಹೊಸದಾಗಿ ಕಟ್ಟಿರುವ ಎರಿಯಪ್ಪ ತಾತ ಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಗ್ರಾಮದಲ್ಲಿ ಮಾತಿನ ಚಕಮಕಿಗಳು ನಡೆಯುತ್ತಿದ್ದವು. ಆದರೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಬಳಿಕ ಒಂದು ಸಮುದಾಯ ಕೋರ್ಟ್ ಮೊರೆ ಹೋಗಿತ್ತು. ಆಗ ಕರ್ನಾಟಕ ಹೈಕೋರ್ಟ್‌ ಧಾರವಾಡದ ಪೀಠ ಪ್ರತಿಷ್ಠಾಪಿಸಿದ ಮೂರ್ತಿ ತೆರವು ಮಾಡಬೇಕು ಎಂದು ಆದೇಶವನ್ನು ನೀಡಿತ್ತು.

ಗ್ರಾಮದಲ್ಲಿ ಘರ್ಷಣೆ ನಡೆದ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಗ್ರಾಮಕ್ಕೆ ಆಗಮಿಸಿದ್ದರು. ಗ್ರಾಮದ ಜನರ ಜೊತೆ ಸಭೆ ನಡೆಸಿ ಸಂಧಾನ ನಡೆಸಲು ಪ್ರಯತ್ನವನ್ನು ಮಾಡಿದ್ದರು. ಆದರೆ ವಿವಾದ ಬಗೆಹರಿಯಲಿಲ್ಲ. ಎರಡು ಸಮುದಾಯಗಳ ನಡುವಿನ ಜಟಾಪಟಿ ಹೆಚ್ಚಾಗಿ ಘರ್ಷಣೆ ನಡೆದಿತ್ತು. ಈ ಘರ್ಷಣೆಯ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರು ಗಾಯಗೊಂಡಿರುವುದು, ಜನರು ಗಾಯಗೊಂಡು ಆಸ್ಪತ್ರೆಗೆ ಸಾಗುತ್ತಿರುವ ಫೋಟೋ, ವಿಡಿಯೋಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಾಕಲಾಗಿತ್ತು.

ಗ್ರಾಮದಲ್ಲಿ ಗಲಾಟೆ ನಡೆಯುವ ಮಾಹಿತಿ ತಿಳಿದು ಪೊಲೀಸರು ಆಗಮಿಸಿದ್ದರು. ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್ ಮಾಡಿದ್ದರು. ಆಗ ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟವನ್ನು ನಡೆಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+