ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಿ.ಎಸ್.ಯಡಿಯೂರಪ್ಪ ಅವರಿಗೆ ಪುತ್ರ ಸೋಲುತ್ತಾನೆ ಎನ್ನುವ ಭಯ'

|
Google Oneindia Kannada News

ಬಳ್ಳಾರಿ, ಅಕ್ಟೋಬರ್ 22 : ' ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಪುತ್ರ ಗೆದ್ದುಬಿಡುತ್ತಾನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರು. ಆದರೆ, ಈಗ ಅವರಿಗೆ ಸೋಲಿನ ಭೀತಿ ಎದುರಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಹೊಸಪೇಟೆಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಶಿವಮೊಗ್ಗ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇವೆ' ಎಂದು ತಿಳಿಸಿದರು.

ಮಂಡ್ಯ ಉಪ ಚುನಾವಣೆ : ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ಗರಂಮಂಡ್ಯ ಉಪ ಚುನಾವಣೆ : ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ಗರಂ

'ಪಕ್ಷ ಎಂದ ಮೇಲೆ ಅಭಿಪ್ರಾಯ ಮತ್ತು ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ. ಉಪ ಚುನಾವಣೆಯಲ್ಲಿ ಎಲ್ಲರೂ ಒಂದಾಗಿದ್ದೇವೆ' ಎಂದು ಸ್ಪಷ್ಟಪಡಿಸಿದರು.

ಬಳ್ಳಾರಿ ಬಿಜೆಪಿ ನಾಯಕರ ಬಾಯಿ ಮುಚ್ಚಿಸಿದ ವಿ.ಎಸ್.ಉಗ್ರಪ್ಪಬಳ್ಳಾರಿ ಬಿಜೆಪಿ ನಾಯಕರ ಬಾಯಿ ಮುಚ್ಚಿಸಿದ ವಿ.ಎಸ್.ಉಗ್ರಪ್ಪ

ನವೆಂಬರ್ 3ರಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಜೆ.ಶಾಂತ ಬಿಜೆಪಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್‌ನಿಂದ ವಿ.ಎಸ್.ಉಗ್ರಪ್ಪ ಕಣದಲ್ಲಿದ್ದಾರೆ. ಈ ಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ....

ಬಳ್ಳಾರಿ ಉಪಚುನಾವಣೆ: ಶ್ರೀರಾಮುಲು ಸಹೋದರಿ ಶಾಂತಾ ಆಸ್ತಿ ವಿವರಬಳ್ಳಾರಿ ಉಪಚುನಾವಣೆ: ಶ್ರೀರಾಮುಲು ಸಹೋದರಿ ಶಾಂತಾ ಆಸ್ತಿ ವಿವರ

ನಾವು ಒಂದಾಗಿದ್ದೇವೆ

ನಾವು ಒಂದಾಗಿದ್ದೇವೆ

'ಶಿವಮೊಗ್ಗದಲ್ಲಿ ತಮ್ಮ ಪುತ್ರ ಗೆದ್ದು ಬಿಡುತ್ತಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದರು. ಆದರೆ, ಈಗ ಅವರಿಗೆ ಸೋಲುವ ಭೀತಿ ಎದುರಾಗಿದೆ. ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿದೆ ಅಂತ ಬಿಜೆಪಿಯವರು ಆರೋಪಿಸಿದ್ದರು. ಆದರೆ, ನಾವು ಒಂದಾಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶ ನೀಡುತ್ತಿದ್ದಂತೆ ಅವರಿಗೆ ಸೋಲಿನ ಭೀತಿ ಎದುರಾಗಿದೆ' ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹೊಂದಾಣಿಕೆ ಅನಿವಾರ್ಯ

ಹೊಂದಾಣಿಕೆ ಅನಿವಾರ್ಯ

'ಶಿವಮೊಗ್ಗ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದೇವೆ. ದೇಶದ ಹಿತದೃಷ್ಟಿಯಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಕೆಲವೆಡೆ ಹೊಂದಾಣಿಕೆ ಅನಿವಾರ್ಯವಾಗಿದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಪಕ್ಷಕ್ಕೆ ಸಂಬಂಧಿಸಿದ್ದಲ್ಲ

ಪಕ್ಷಕ್ಕೆ ಸಂಬಂಧಿಸಿದ್ದಲ್ಲ

'ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ಒಂದಷ್ಟು ಭಿನ್ನಾಭಿಪ್ರಾಯವಿದೆ. ಆದರೆ, ಅದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಅತೃಪ್ತಿ ಉಂಟಾಗಿರಬಹುದು. ಆದರೆ, ಉತ್ತಮ ಫಲಿತಾಂಶಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲವ ಮಾಡುತ್ತಿದ್ದೇವೆ' ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ

ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ

'ಪಕ್ಷ ಅಂದ ಮೇಲೆ ಅಭಿಪ್ರಾಯ-ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ. ಐದೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಮೈತ್ರಿ ಅಭ್ಯರ್ಥಿಗಳು ಜಯಗಳಿಸುತ್ತೇವೆ ಎಂಬ ವಿಶ್ವಾಸವಿದೆ' ಎಂದರು.

ಜೆಡಿಎಸ್-ಬಿಜೆಪಿ ಹೋರಾಟ

ಜೆಡಿಎಸ್-ಬಿಜೆಪಿ ಹೋರಾಟ

ನವೆಂಬರ್ 3ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅಭ್ಯರ್ಥಿ, ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣದಲ್ಲಿದ್ದಾರೆ.

English summary
Karnataka BJP president B.S.Yeddyurappa in fear of his son will lost in Shivamogga Lok Sabha By election 2018 said KPCC president Dinesh Gundu Rao. He attacked the BJP again for party achievement in central government in last 4 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X