ಬಳ್ಳಾರಿಗೆ ನೂತನ ಎಸ್‌ಪಿ ನೇಮಕ
ಬಳ್ಳಾರಿ, ಜನವರಿ 8: ಬಳ್ಳಾರಿ ಬ್ಯಾನರ್ ಘರ್ಷಣೆ ವಿಚಾರವಾಗಿ ರಾಜ್ಯ ಸರ್ಕಾರ ಎಸ್‌ಪಿ ಪವನ್ ನೆಜ್ಜೂರ್ ಅವನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಇದೀಗ ಇವರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. ಹಾಗಾದ್ರೆ ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಳ್ಳಾರಿ ಬ್ಯಾನರ್ ಘರ್ಷಣೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರವು ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ. ಇದೀಹ ಡಾ.ಪಿ.ಎಸ್.ಹರ್ಷ ಬಳ್ಳಾರಿ ವಲಯದ ಹೊಸ ಐಜಿಪಿ, ಡಾ.ಸುಮನ್ ಪೆನ್ನೆಕರ್ ಅವರನ್ನು ನೂತನ ಎಸ್‌ಪಿ ಆಗಿ ನೇಮಕ ಮಾಡಲಾಗಿದೆ.

ರಾಜ್ಯದ 5 ಐಪಿಎಸ್ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಪ್ರಮುಖವಾಗಿ ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನು ಇತ್ತೀಚೆಗಷ್ಟೇ ಬ್ಯಾನರ್ ಘರ್ಷಣೆ ಸಂಬಂಧ ಅಮಾನತು ಮಾಡಲಾಗಿದ್ದು, ಅವರ ಜಾಗಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿ ನೂತನ ಎಸ್‌ಪಿ ವಿವರ: ಬೆಂಗಳೂರಿನ ಗುಪ್ತವಾರ್ತೆ ವಿಭಾಗದ ಡಿಸಿಪಿ ಆಗಿದ್ದ ಸುಮನ್ ಪನ್ನೇಕರ್ ಅವರನ್ನು ಬಳ್ಳಾರಿಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ 31ರಂದು ಹೊಸದಾಗಿ ಎಸ್‌ಪಿ ಆಗಿದ್ದ ಪವನ್ ನೆಜ್ಜೂರ್ ಅವರನ್ನು ಬ್ಯಾನರ್ ಘರ್ಷಣೆ ಪ್ರಕರಣ ಕಾರಣ ಅಮಾನತು ಮಾಡಲಾಗಿತ್ತು.
ನೂತನ ಡಿಐಜಿ ನೇಮಕ: ವರ್ತಿಕಾ 2026ರ ಹೊಸ ವರ್ಷದ ಹಿಂದಿನವೇ ರಾಜ್ಯದಲ್ಲಿ 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. 2004ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪಿ.ಎಸ್ ಹರ್ಷ ಅವರನ್ನು ಬಳ್ಳಾರಿ ವಲಯದ ಹೊಸ ಪೊಲೀಸ್ ಮಹಾನಿರೀಕ್ಷಕರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಐಎಎಸ್ ಅಧಿಕಾರಿಗಳಾದ ಸಲ್ಮಾ ಕೆ.ಫಹೀಮ್ ಮತ್ತು ಕನಗವಲ್ಲಿ ಎಂ.ಅವರನ್ನು ಬುಧವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ಸಲ್ಮಾ ಕೆ.ಫಹೀಮ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಪರಿಶಿಷ್ಟ ಪಂಗಡ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಇನ್ನೂ ಈ ಮೊದಲು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಆಗಿದ್ದ ಕನಗವಲ್ಲಿ ಎಂ.ಅವರನ್ನು ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ರಾಜ್ಯ ವೈದ್ಯಕೀಯ ಉಪಕರಣಗಳ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.
22 ಐಎಎಸ್ ಅಧಿಕಾರಿಗಳ ವರ್ಗಾವಣೆ: ಹೊಸ ವರ್ಷದ ಮುನ್ನ ದಿನವೇ ಅಂದರೆ ಡಿಸೆಂಬರ್ 31ರಂದು ದಿಢೀರ್ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸೇರಿದಂತೆ 22 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಪ್ರಮುಖವಾಗಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಸೇರಿ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕ ಮಾಡಲಾಗಿದೆ. ಶಿವಮೊಗ್ಗ, ತುಮಕೂರಿಗೆ ಇನ್ನೂ ನಿಯೋಜನೆ ಮಾಡಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications