ಬಳ್ಳಾರಿಯಲ್ಲಿ ಕುಡಿಯುವ ನೀರಿನ ಕೊರತೆ: ಪತ್ರದ ಮೂಲಕ ಗಮನ ಸೆಳೆದ ಮಾಜಿ ಸಚಿವ
ಬಳ್ಳಾರಿ, ಮಾರ್ಚ್ 11: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿದೆ. ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಕಂಡುಬಂದಿದೆ. ಗ್ರಾಮಗಳಿಗೆ ನೀರು ಒದಗಿಸುವ ಬಗ್ಗೆ ಕರ್ನಾಟಕ ನೀರಾವರಿ ನಿಗಮದ ಇಂಜಿನಿಯರ್, ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆಯಲಾಗಿದೆ.
ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಬಿ. ನಾಗೇಂದ್ರ ಶಾಸಕರು ಹಾಗೂ ಮಾಜಿ ಸಚಿವರು, ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಪತ್ರವನ್ನು ಬರೆದಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದ ವಿವರಗಳು: ಮುಖ್ಯ ಇಂಜಿನಿಯರ್, ಕರ್ನಾಟಕ ನೀರಾವರಿ ನಿಗಮ, ನೀರಾವರಿ ಕೇಂದ್ರ ವಲಯ, ಮುನಿರಾಬಾದ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ಮತಕ್ಷೇತ್ರವಾದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂ. ಗೋನಾಳು, ಜಾಲಿಹಾಳು, ಹೊಸಯರಗುಡಿ, ಸಿಂಧವಾಳ, ಹಳೆಯರಗುಡಿ, ಬೊಮ್ಮನಹಾಳು ಮತ್ತು ಬೆಣಕಲ್ಲು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.
ಸದರಿ ಗ್ರಾಮಗಳ ಹತ್ತಿರದಲ್ಲಿ ಕುಡಿಯುವ ನೀರಿನ ಕೆರಗಳು ಲಭ್ಯವಿದ್ದು, ಸದರಿ ಕೆರೆಗಳಿಗೆ ತುಂಗಭದ್ರಾ ಬಲದಂಡ ಕೆಳಮಟ್ಟದ ಕಾಲುವ ಕಿ. ಮೀ. 146/ 300ರಲ್ಲಿ ಕುಡಿಯುವ ನೀರಿಗಾಗಿ ನೀರನ್ನು ಪಡೆಯಲಾಗುತ್ತಿದ್ದು, ಸದ್ಯ ತುಂಗಭದ್ರಾ ಮಂಡಳಿಯವರು ಸದರಿ ಸ್ಥಳದಿಂದ ನೀರನ್ನು ಪಡೆಯಲು ತುಂಗಭದ್ರಾ ಮಂಡಳಿಯವರ ಅನುಮತಿ ಪಡೆಯುವುದು ಅವಶ್ಯಕತೆ ಎಂದು ನೀರು ಪೂರೈಸುವುದನ್ನು ನಿಲ್ಲಿಸಿರುತ್ತಾರೆ.
ತುಂಗಭದ್ರಾ ಮಂಡಳಿಯವರ ಅನುಮತಿ ಪಡೆಯುವಲ್ಲಿ ವಿಳಂಬವಾಗಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಸದರಿ ಕೆರೆಯ ಹತ್ತಿರವಿರುವ ಡಿಪಿ ನಂ. 41ಕ್ಕೆ ಹೆಚ್ಚುವರಿಯಾಗಿ ಒಂದು ಕ್ಯೂಸೆಕ್ ನೀರನ್ನು ಒದಗಿಸಿ ಕೊಡಲು ಸಂಬಧಪಟ್ಟವರಿಗೆ ತಾವು ಸೂಕ್ತ ನಿರ್ದೇಶನ ನೀಡಬೇಕೆಂದು ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿಯನ್ನು ತೆರೆಯುವ ಮೂಲಕ ಜನರು ದೂರು ಸಲ್ಲಿಕೆ ಮಾಡಲು ಅವಕಾಶ ನೀಡಬೇಕು ಎಂದು ನಿರ್ದೇಶನವನ್ನು ಕೊಟ್ಟಿದೆ.
ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಎಲ್ಲಾ ಕೆರೆಗಳಲ್ಲಿ ಕುಡಿಯುವ ನೀರು ಸಂಗ್ರಹಣೆ ಮಾಡಿಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಾರಿಯ ಬೇಸಿಗೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 71 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಹುದು ಎಂದು ಜಿಲ್ಲಾಡಳಿತ ವರದಿ ತಯಾರು ಮಾಡಿದೆ. ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ.
-
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications