• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿ ಲಾರಿ ಮುಖಾಮುಖಿ ಡಿಕ್ಕಿ: ಚಾಲಕ ಸಾವು

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಸೆಪ್ಟೆಂಬರ್ 30: ಲಾರಿಗಳು‌ ಮುಖಾಮುಖಿ ಡಿಕ್ಕಿ‌ ಹೊಡೆದ ಪರಿಣಾಮ ಒಬ್ಬ ಚಾಲಕ ಮೃತಪಟ್ಟಿದ್ದು, ಮತ್ತೊಮ್ಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರ ಸೆಂಟ್ರಲ್ ಆಸ್ಪತ್ರೆಯ ಬಳಿ ಇಂದು ನಡೆದಿದೆ.

ಟಿಪ್ಪರ್ ಲಾರಿ ಚಾಲಕ ಹಾಗೂ ಕಾರಿಗನೂರ ನಿವಾಸಿ ರಾಮು (35) ಮೃತ ಚಾಲಕ. ಆಂಧ್ರಪ್ರದೇಶದ ಸಿವಿಲ್ ಲಾರಿ ಚಾಲಕ ನಾಗರಾಜ್ ಅವರ ಕೈಗೆ ಹಾಗೂ ತಲೆಗೆ ಪೆಟ್ಟಾಗಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ.

ಸಾವಳಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಗರ್ಭಿಣಿ ಸೇರಿ 7 ಮಂದಿ ಸಾವು

ಅಪಘಾತ ಸಂಭವಿಸಿದಾಗ ರಾಮು ಅವರನ್ನು‌ ನಗರದ ನೂರರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ‌ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಚಾಲಕ ನಾಗರಾಜ, ಮತ್ತೊಂದು ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ರಾಮು ಅವರು ಜಿ.ಜಿ.ಮೈನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.‌

English summary
The driver of a truck was killed and another driver was seriously injured in an accident between lorry's in hosapete of ballari district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X