ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳಿಗೆ ಈಗ ‘ಇ-ಸ್ಪಂದನೆ’

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜನವರಿ 29: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ಸ್ವೀಕರಿಸುವ ಕಂಟ್ರೋಲ್ ರೂಂ "ಇ-ಸ್ಪಂದನೆ" ಪ್ರಾರಂಭಿಸಲಾಗಿದೆ.

ಈ ಕಂಟ್ರೋಲ್ ರೂಂ ಅನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಉದ್ಘಾಟಿಸಿದ್ದಾರೆ. ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ‌. ಸಮಸ್ಯೆಗಳನ್ನು ವಿದ್ಯುನ್ಮಾನ ವ್ಯವಸ್ಥೆಯ ಮೂಲಕ ಶೀಘ್ರವಾಗಿ ಪರಿಹರಿಸಲಾಗುತ್ತದೆ.

ಕೊಡಗು ಪ್ರವಾಹ ಸಂತ್ರಸ್ತರ ಸ್ಥಿತಿ-ಗತಿ ಅವಲೋಕಿಸಿದ ಲೋಕಾಯುಕ್ತರುಕೊಡಗು ಪ್ರವಾಹ ಸಂತ್ರಸ್ತರ ಸ್ಥಿತಿ-ಗತಿ ಅವಲೋಕಿಸಿದ ಲೋಕಾಯುಕ್ತರು

ವಾಟ್ಸ್ ‍ಆಪ್ ನಂ: 8277888866 ಮೊಬೈಲ್ ನಂಬರ್ ಗೆ ಸಮಸ್ಯೆಗಳನ್ನು ಕಳುಹಿಸಬಹುದಾಗಿದೆ. ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ದೂರು, ಕುಂದುಕೊರತೆಗಳಿದ್ದಲ್ಲಿ ಈ ನಂಬರ್ ಗೆ ಸಂಬಂಧಿಸಿದ ಫೋಟೊ, ವಿಡಿಯೋ, ಸಂದೇಶಗಳನ್ನು ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಬಹುದಾಗಿದೆ. ತಮ್ಮ ದೂರು/ಸಮಸ್ಯೆ/ಕುಂದುಕೊರತೆಗಳ ಪರಿಹಾರಕ್ಕಾಗಿ ಆ ಸಂದೇಶಗಳನ್ನು ಸಂಬಂಧಪಟ್ಟ ಇಲಾಖೆಗೆ ಶೀಘ್ರವಾಗಿ ರವಾನಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

E Spandane Started In DC Office To Public Grievances In Bellary

1077 ಸಂಖ್ಯೆಗೆ ಉಚಿತವಾಗಿ ಕರೆ ಮಾಡಿಯೂ ದೂರು ದಾಖಲಿಸಬಹುದು. ಡಿಸಿ ಕಚೇರಿಯಲ್ಲಿ ಆರಂಭಿಸಲಾಗಿರುವ ಈ ಇ-ಸ್ಪಂದನೆ ಕೋಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ದೂರುದಾರರ ಹೆಸರು, ದೂರಿನ ವಿವರ ಹಾಗೂ ವಿಳಾಸ, ದಾಖಲೆಗಳನ್ನು ಪಡೆದುಕೊಂಡು ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಇರುತ್ತದೆಯೋ ಅದಕ್ಕೆ ಜಿಲ್ಲಾ ಮಟ್ಟದ ಅಥವಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಸ್‍ಎಂಎಸ್ ಮೂಲಕ ರವಾನಿಸಲಿದ್ದಾರೆ. ಅವರು ಅದಕ್ಕೆ ಸಂಬಂಧಿಸಿದ ನಿರ್ದಿಷ್ಟ ಉತ್ತರವನ್ನು ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಲಿದ್ದಾರೆ. ಅವರು ಕಳುಹಿಸಿರುವುದಕ್ಕೆ ಸ್ವೀಕೃತಿ ಮತ್ತು ದೂರುದಾರರೂ ತಮ್ಮ ದೂರಿನ ಪ್ರಗತಿಯನ್ನು ಎಸ್‍ಎಂಎಸ್ ಮೂಲಕ ಪಡೆಯಬಹುದಾಗಿದೆ.

E Spandane Started In DC Office To Public Grievances In Bellary

ಸಾಮಾನ್ಯವಾಗಿ ಒಂದು ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳಿಗೆ 30 ದಿನಗಳ ಕಾಲಾವಶಕಾಶ ನೀಡಲಾಗಿದ್ದು, ಅಷ್ಟರೊಳಗೆ ನಿರ್ದಿಷ್ಟ ಉತ್ತರ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಲಗತ್ತಿಸಿ ಕಳುಹಿಸಬೇಕಿರುತ್ತದೆ.

English summary
The "E-Spandane" has been launched at the District Collector's Office to immediately respond to public issues in bellary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X