Lokayukta Raids On GESCOM JEE: ಬಳ್ಳಾರಿಯಲ್ಲಿ ಜೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ, ಏಪ್ರಿಲ್, 24: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜೆಸ್ಕಾಂ ಎಇಇ ಆಗಿರುವ ಹುಸೇನ್ ಸಾಬ್ ಅವರ ಮನೆ ಮೇಲೆ ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.
ಇಂದು ಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯ ಲೋಕಾಯುಕ್ತ ತಂಡಗಳು ಹುಸೇನ್ ಸಾಬ್ ಅವರ ಬಳ್ಳಾರಿ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ, ರಾಘವೇಂದ್ರ ಕಾಲೋನಿಯಲ್ಲಿರುವ ಮನೆ ಮತ್ತು ಹುಟ್ಟೂರು ಶಿಡಿಗಿನಮೊಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದವು.

ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಎಸ್‌ಪಿ ಅಶೋಕ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು, ಆಸ್ತಿ, ತೆರಿಗೆ ಹಣದ ಬಗ್ಗೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೊತೆಗೆ ಕೋಲಾರದಲ್ಲಿ ಲೋಕಾಯುಕ್ತ ರೇಡ್ ನಡೆದಿದೆ. ಬಂಗಾರುಪೇಟೆ ಮುಳಬಾಗಿಲು ತಾಲೂಕು ಪಂಚಾಯಿತಿ ಇಒ ವೆಂಕಟೇಶ್ವರಪ್ಪ ಅವರಿಗೆ ಸೇರಿದ ಐದು ಕಡೆ ದಾಳಿ ಮಾಡಲಾಗಿದೆ.ಎಂಟು ವರ್ಷದಿಂದ ವೆಂಕಟೇಶ್ವರಪ್ಪ ಸೇವೆ ಸಲ್ಲಿಸುತ್ತಿದ್ದರು. ಎರಡು ದಿನದ ಹಿಂದೆ ವರ್ಗಾವಣೆ ಮಾಡಲಾಗಿತ್ತು.
ನಾಲ್ಕೈದು ಅಧಿಕಾರಿಗಳ ತಂಡ ಬೇರೆ ಬೇರೆ ಕಡೆ ದಾಳಿ ನಡೆದಿದೆ. ಭ್ರಷ್ಟಾಚಾರದ ಆರೋಪದಲ್ಲಿ ದಾವಣಗೆರೆಯಲ್ಲೂ ಲೋಕಯುಕ್ತ ದಾಳಿ ನಡೆದಿದೆ. ಅವರ ಆದಾಯಕ್ಕಿಂತ ಹೆಚ್ಚು ಆದಾಯ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಚುನಾವಣೆ ಬೆನ್ನಲ್ಲೆ ಸಾಕಷ್ಟು ಹಣ ಕೂಡ ಇವರ ಮನೆಯಲ್ಲಿ ಇರಬಹುದು ಎನ್ನುವ ಅನುಮಾನದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.












Click it and Unblock the Notifications