ಬಳ್ಳಾರಿಯಲ್ಲಿ ಶ್ರೀರಾಮುಲು ಸೇರಿ 12 ಅಭ್ಯರ್ಥಿಗಳು ಕಣದಲ್ಲಿ

ಬಳ್ಳಾರಿ, ಮಾ.28 : ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವುಗಳಲ್ಲಿ ಎರಡು ನಾಮಪತ್ರ ತಿಸ್ಕೃತಗೊಂಡಿದ್ದು, 12 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಶನಿವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಶನಿವಾರ ಅಭ್ಯರ್ಥಿಗಳ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಗುರುವಾರ ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳನ್ನು ಪರಿಶೀಲನೆ ನಡೆಸಿದ್ದು, ಒಟ್ಟು 14 ಅಭ್ಯರ್ಥಿಗಳ ಪೈಕಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ ಎನ್.ವೈ. ಗೋಪಾಲಕೃಷ್ಣ ಮತ್ತು ಬಿ. ಶ್ರೀನಿವಾಸಲು ಅವರ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ.

Bellary

ಅಂತಿಮವಾಗಿ ಕಣದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು, ಕಾಂಗ್ರೆಸ್‍ ಪಕ್ಷದ ಎನ್.ವೈ. ಹನುಮಂತಪ್ಪ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಿವಕುಮಾರ್ ಗಿರಿಯಪ್ಪ ಮಾಳಗಿ, ಜೆಡಿಎಸ್‍ ಪಕ್ಷದ ರವಿನಾಯಕ್ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳಿದ್ದಾರೆ. ಶನಿವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ನಂತರ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. [ಶ್ರೀರಾಮುಲು ಭರ್ಜರಿ ಪ್ರಚಾರ]

ಶ್ರೀರಾಮುಲು ಭರ್ಜರಿ ಪ್ರಚಾರ : ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಾರ್ಚ್ 27ರಿಂದ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿರುವ ಅವರು, ಮಾ. 29ರಂದು ಕೊಟ್ಟೂರು, 31 ರಂದು ಹಗರಿಬೊಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ.[ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]

ಏಪ್ರಿಲ್ 1 ಮತ್ತು 2 ರಂದು ಕೂಡ್ಲಿಗಿ ವಿಧಾನಸಭೆ ಕ್ಷೇತ್ರದಲ್ಲಿ ಮತ್ತು ಏ. 3 ಮತ್ತು 4 ರಂದು ಹೊಸಪೇಟೆ ವಿಜಯನಗರ ಕ್ಷೇತ್ರದಲ್ಲಿ, 5 ಮತ್ತು 6 ರಂದು ಸಂಡೂರು ವಿಧಾನಸಭೆ ಕ್ಷೇತ್ರಗಳಲ್ಲಿ ಶ್ರೀರಾಮುಲು ಸಂಚರಿಸಿ ಮತ ನೀಡುವಂತೆ ಮನವಿ ಮಾಡಲಿದ್ದಾರೆ. ಏ. 10, 11 ಮತ್ತು 12ರಂದು ಬಳ್ಳಾರಿ ನಗರ ವಿಧಾನಸಭೆ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರಗಳಲ್ಲಿ ಶ್ರೀರಾಮುಲು ಮತ ಯಾಚಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+