Tungabhadra Dam: ತುಂಗಭದ್ರಾ ಡ್ಯಾಂನಿಂದ ಹೆಚ್ಚುವರಿ ನೀರು ಬಿಡುಗಡೆ, ಜನರಿಗೆ ಎಚ್ಚರಿಕೆ

ಬಳ್ಳಾರಿ, ಜುಲೈ. 27: ರಾಜ್ಯದಲ್ಲಿ ಬಹುತೇಕ ಡ್ಯಾಂಗಳು ಭರ್ತಿಯಾಗುತ್ತಿವೆ. ಹಲವು ಡ್ಯಾಂಗಳಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ರವಾನಿಸುತ್ತಿದೆ. ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ.

ಈಗಾಗಲೇ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಕಂಪ್ಲಿಯ ಕೋಟೆ ಪ್ರದೇಶದ ಬಳಿಯ ಪ್ರವಾಹ ಹಿನ್ನಲೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

Excess water release from Tungabhadra Dam Alert issued

ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ನದಿಭಾಗ ಗ್ರಾಮದ ಜನರು ನದಿಪಾತ್ರಕ್ಕೆ ತೆರಳಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು. ಕಂಪ್ಲಿ ಮತ್ತು ಗಂಗಾವತಿ ಸಂಪರ್ಕ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯವಾಗಿ ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸಬಹುದು ಎಂದು ತಿಳಿಸಿದ್ದಾರೆ.

Excess water release from Tungabhadra Dam Alert issued

ನೂತನ ಸೇತುವೆ ನಿರ್ಮಾಣದ ಕುರಿತು ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಕಂಪ್ಲಿಯಲ್ಲಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನದಿಪಾತ್ರದ ಬಳಿ ಪೊಲೀಸರನ್ನು ನಿಯೋಜಿಸಿದೆ. ಯಾರೂ ನದಿಪಾತ್ರಕ್ಕೆ ತೆರಳಬಾರದು. ತುರ್ತು ಸಂದರ್ಭಕ್ಕೆ ತಾಲ್ಲೂಕು ಆಡಳಿತ ಅಥವಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಲ್ಲಿ ಮನವಿ

ನದಿ ಪಾತ್ರ, ದಂಡೆ ಮತ್ತು ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ಜೋಪಾನ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಬಳಿಕ ಕಂಪ್ಲಿ ಪಟ್ಟಣದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+