ಬಳ್ಳಾರಿ; ಉಪ ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ
ಬಳ್ಳಾರಿ, ಜನವರಿ 05: ಉಪ ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬಸವರಾಜ ವೀರಾಪೂರ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಲಯ ಅರಣ್ಯಾಧಿಕಾರಿಯಾಗಿ ಬಸವರಾಜ ವೀರಾಪೂರ ಸೇವೆ ಸಲ್ಲಿಸುತ್ತಿದ್ದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪೂರ ಗ್ರಾಮದ ನಿವಾಸಿ ಸಂಡೂರಿನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಬಸವರಾಜ ವೀರಾಪೂರ ಅವರು ಕಳೆದ ತಿಂಗಳು ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ
* ಡಿಸೆಂಬರ್ 21ರಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿತ್ತು.
* ಡಿಸೆಂಬರ್ 17ರಂದು ಬೆಂಗಳೂರಲ್ಲಿ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದರು.












Click it and Unblock the Notifications