ಬಳ್ಳಾರಿಯಲ್ಲಿ 425 ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಸಜ್ಜು: ಸಾರ್ವಜನಿಕರ ಆಕ್ರೋಶ
ಬಳ್ಳಾರಿ, ಮೇ 25: ಬಳ್ಳಾರಿ ಗಣಿ ಉದ್ಯಮವು ಜಿಲ್ಲೆಯ ಆರ್ಥಿಕ ಸ್ಥಿತಿಗತಿ ಬದಲಾಯಿಸಿತಾದರೂ, ಪರಿಸರದ ಮೇಲಿನ ಆಘಾತ ಮಾತ್ರ ವಿವರಿಸಲು ಅಸಾಧ್ಯವಾಗಿದೆ. ಅದಿರನ್ನು ಬಗೆದು ಬಗೆದು ಸಂಡೂರಿನ ಒಡಲನ್ನು ಖಾಲಿ ಮಾಡುವುದರ ಜೊತೆಗೆ ಪರಿಸರ ನಾಶ ಕೂಡ ನಡೆದುಹೋಗಿದೆ.
ಗಣಿ ಭರಾಟೆಯಿಂದಾಗಿ ಲಕ್ಷಾಂತರ ಮರಗಳನ್ನು ಕತ್ತರಿಸಿಲಾಯಿತು. ಈಗ ರಸ್ತೆ ವಿಸ್ತರಣೆ ಮಾಡುವ ನೆಪದಲ್ಲಿ ಮತ್ತೊಮ್ಮೆ ಮರಗಳ ಮಾರಣಹೋಮಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗಬೇಕಾಗಿದೆ. ಮೂಲಭೂತ ಸೌಕರ್ಯ ವೃದ್ಧಿಸುವ ಹೆಸರಿನಲ್ಲಿ ಹತ್ತಾರು ವರ್ಷಗಳ ಕಾಲ ಹಳೆಯದಾದ ಮರಗಳನ್ನು ಕಡಿಯಲು ರಾಜ್ಯ ಸರ್ಕಾರ ಸಜ್ಜಾಗಿ ನಿಂತಿದೆ.

ಬಿರು ಬಿಸಿಲಿನ ನಾಡಲ್ಲಿ ಜನರಿಗೆ ನೆರಳನ್ನು ನೀಡುತ್ತಿದ್ದ ದಶಕದ ಮರಗಳು ಇದೀಗ ನೆಲಕ್ಕುರಳುವ ಸಮಯ ಸಮೀಪಿಸಿದೆ.
ಬಳ್ಳಾರಿ ನಗರದಲ್ಲಿ ರಸ್ತೆ ವಿಸ್ತರಣೆಗಾಗಿ 425 ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.
ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಯಿಂದ ಕುವೆಂಪು ನಗರದ ಮುಖ್ಯರಸ್ತೆಯ ಮೂಲಕ ಹೊಸಪೇಟೆಯ ರಸ್ತೆಯ ಎರಡು ಬದಿ ಬೆಳೆದಿರುವ 425 ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಇದೀಗ ಮುಂದಾಗಿದೆ. ಅರಣ್ಯ ಇಲಾಖೆಯ ಈ ನಡೆ ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬಳ್ಳಾರಿ ನಗರಕ್ಕೆ ಬಿರುಬಿಸಿಲಿನ ತಾಪದಿಂದ ಕಾಪಾಡಲು ಇರುವ ಮರಗಳ ಸಂಖ್ಯೆ ಕಡಿಮೆ. ಇಂತಹ ಪರಿಸ್ಥಿತಿಯಲ್ಲಿ ಇದೀಗ ರಸ್ತೆ ಅಭಿವೃದ್ದಿಗಾಗಿ ಮರಗಳನ್ನ ಕಡಿಯಲು ಅರಣ್ಯ ಇಲಾಖೆ ಹೊರಟಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ರಸ್ತೆ ವಿಸ್ತರಣೆಗೆ ತೆರವುಗೊಳಿಸುತ್ತಿರುವ ಮರಗಳನ್ನ ಬೇರೆಡೆ ಸ್ಥಳಾಂತರ ಮಾಡದೇ ಏಕಾಏಕಿ ಕಡಿದು ಹಾಕಲು ಮುಂದಾಗಿರುವುದು ನಿಜಕ್ಕೂ ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗಿದೆ.

ಪರಿಸರ ದಿನಾಚರಣೆ, ವಿಶ್ವ ಪರಿಸರ ದಿನಾಚರಣೆ ವೇಳೆ ಮನೆಗೊಂದು ಮರ, ಊರಿಗೊಂದು ವನ ಎಂದು ಅರಣ್ಯ ಇಲಾಖೆಯೇ ಪ್ರಚಾರ ಮಾಡಿ ಇದೀಗ ಬೃಹತ್ತಾಗಿ ಬೆಳೆದು ನಿಂತಿರುವ ಮರಗಳನ್ನು ಸ್ವತ: ಅರಣ್ಯ ಇಲಾಖೆಯೇ ಕಡಿದು ಹಾಕಲು ಮುಂದಾಗಿರುವುದು ಹೋರಾಟಗಾರರು ಆಕ್ರೋಶಕ್ಕೆ ಕಾರಣವಾಗಿದೆ.
ಅರಣ್ಯ ಇಲಾಖೆಯ ಕ್ರಮವನ್ನು ಹಲವಾರು ಸಂಘಟನೆಗಳು. ಪರಿಸರ ಪ್ರೇಮಿಗಳು ವಿರೋಧಿಸಿದ್ದು, ಮರ ಕಡಿಯಲು ಆಕ್ಷೇಪಣೆ ಸಲ್ಲಿಸಿವೆ. ಮರಗಳನ್ನು ಬೇರೆಡೆಗೆ ಸ್ಥಳಾಂತರ ಮಾಡದೇ ಕಡಿದು ಹಾಕಿದರೆ, ಕಾನೂನು ಹೋರಾಟ ಮಾಡಲಾಗುವುದೆಂದು ಪರಿಸರ ಪ್ರೇಮಿಗಳು ಎಚ್ಚರಿಕೆ ನೀಡುತ್ತಿದ್ದಾರೆ.
ಬೇಸಿಗೆ ಕಾಲದಲ್ಲಿ ಬಿಸಿಲ ನಾಡು ಬಳ್ಳಾರಿಯಲ್ಲಿ ನೆರಳು ಸಿಗುವುದೇ ಅಪರೂಪ. ಇಂತಹ ಪರಿಸ್ಥಿತಿಯಲ್ಲಿ ನೆರಳಿನ ಆಸರೆಯನ್ನು ನೀಡುತ್ತಿರುವ ಮರಗಳನ್ನು ಕಡಿಯಲು ಹೊರಟಿರುವದನ್ನು ಸ್ಥಳೀಯರು ತೀವ್ರವಾಗಿ ವಿರೋಧಿಸಿದ್ದಾರೆ. ಇರುವ ಅಲ್ಪ ಸಂಖ್ಯೆಯ ಮರಗಳನ್ನು ಉಳಿಸಿ ಎಂದು ಸ್ಥಳೀಯರು ಹೋರಾಟಕ್ಕೆ ಇಳಿದಿದ್ದಾರೆ.
ಪರಿಸರ ಅಸಮತೋಲನದ ದುಷ್ಪರಿಣಾಮವನ್ನು ಈಗಾಗಲೇ ನಾವೆಲ್ಲ ಅನುಭವಿಸುತ್ತಿದ್ದೇವೆ. ಈ ಸಲ ಬೇಸಿಗೆಯ ಆರಂಭದ ದಿನಗಳಿಂದ ಇಲ್ಲಿಯವರೆಗೂ ಕಂಡು ಕೇಳರಿಯದ ರೀತಿಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ಜನ ತತ್ತರಿಸಿ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೆ ಹನಿ ಹನಿ ನೀರಿಗೂ, ಉಸಿರಾಡುವ ಗಾಳಿಗೂ ಜನ ಇಂದು ಪರಿತಪಿಸುವಂತಾಗಿ ಬಿಟ್ಟಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮರಗಳನ್ನು ಉಳಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಸರಕಾರವೇ ಮರಗಳ ಮಾರಣ ಹೋಮ ಮಾಡ ಹೊರಟಿರುವುದು ಎಷ್ಟು ಸರಿ ಎಂದು ಜನಸಾಮಾನ್ಯರು ಪ್ರಶ್ನಿಸುತ್ತಿದ್ದಾರೆ.
ರಸ್ತೆ ವಿಸ್ತರಣೆಗಾಗಿ ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಯಿಂದ ಕುವೆಂಪು ನಗರದ ಮುಖ್ಯ ರಸ್ತೆಯ ಮೂಲಕ ಹೊಸಪೇಟೆಯ ರಸ್ತೆಯ ಎರಡು ಬದಿ ಬೆಳೆದಿರುವ 425 ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ ಸಾರ್ವಜನಿಕರ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದು. ಮರಗಳ ಸ್ಥಳಾಂತರಕ್ಕೆ ಅರಣ್ಯ ಇಲಾಖೆಗೆ ತಿಳಿಸಲಾಗಿದೆ. ಮರಗಳ ಕಡಿತಕ್ಕೆ ಬದಲಾಗಿ ಗಿಡಗಳ ಪುನರ್ ನೆಡುವಿಕೆಗೆ ನಿಯಮಗಳಿದ್ದು ಅದನ್ನು ಅರಣ್ಯ ಇಲಾಖೆ ಮುಂದಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications