ಮಾಜಿ ಸಚಿವ ಈಟಿ ಶಂಭುನಾಥ ವಿಧಿವಶ: ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಹೊಸಪೇಟೆ, ಆಗಸ್ಟ್ 09: ಕರುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಈಟಿ ಶಂಭುನಾಥ (77)ಇಂದು ಗುರುವಾರ ಮಧ್ಯಾಹ್ನ 12ಗಂಟೆಗೆ ನಿಧನರಾಗಿದ್ದಾರೆ.
ಶಂಭುನಾಥ 1941, ಡಿಸೆಂಬರ್ 23ರಂದು ಜನಿಸಿದ್ದರು. 1965ರಲ್ಲಿ ಬಿ.ಇ.ಸಿವಿಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಶಂಭುನಾಥ್, 1990 ರಲ್ಲಿ ಬಂಗಾರಪ್ಪ ಸರ್ಕಾರದಲ್ಲಿ ಅರಣ್ಯ ಖಾತೆ ಸಚಿವರಾಗಿದ್ದರು.

1989ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೂವಿನ ಹಡಗಲಿ ಕ್ಷೇತ್ರದಿಂದ ದಿವಂಗತ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1992ರಲ್ಲಿ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಕನಕ ಗುರು ಪೀಠ ಸ್ಥಾಪನೆ ಶ್ರಮಿಸಿದ್ದರು ಶಂಭುನಾಥ್.
ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಹೂವಿನಹಡಗಲಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.












Click it and Unblock the Notifications