ಈ ಬಾರಿ ಹಂಪಿ ಉತ್ಸವ ಇಲ್ಲ, ಸರ್ಕಾರ ಅಧಿಕೃತ ಘೋಷಣೆ

ಬಳ್ಳಾರಿ, ನವೆಂಬರ್ 27: ಈ ಬಾರಿ ಹಂಪಿ ಉತ್ಸವ ಆಚರಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೂರಕ್ಕಿಂತಲೂ ಹೆಚ್ಚು ತಾಲೂಕುಗಳಲ್ಲಿ ಬರ ಇರುವ ಕಾರಣ ಆಡಂಬರವಾಗಿ ಹಂಪಿ ಉತ್ಸವ ಮಾಡಲು ಸಾಧ್ಯವಿಲ್ಲ, ಹೀಗಾಗಿ ಹಂಪಿ ಉತ್ಸವವನ್ನು ಮುಂದೂಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿ ಉತ್ಸವಕ್ಕೆಂದೇ 10ಕೋಟಿ ರೂ,ಗಳ ಅನುದಾನವನ್ನು ತೆಗೆದಿರಿಸುತ್ತಿತ್ತು, ಆದರೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಹಂಪಿ ಉತ್ಸವಕ್ಕೆ ಯಾವುದೇ ಅನುದಾನವನ್ನು ತೆಗೆದಿರಿಸಿರಲಿಲ್ಲ.

Govt cancels Hampi Utsav this year

ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲವಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಂಪನ್ಮೂಲ ಕ್ರೋಢೀಕರಿಸಿ ಹಂಪಿ ಉತ್ಸವ ನೆರವೇರಿಸುವುದಾಗಿ ಹಂಪಿ ಉತ್ಸವ ನಡೆಸುವುದಾಗಿ ಡಿಕೆ ಶಿವಕುಮಾರ್‌ ತಿಳಿಸಿದ್ದರು.

ಬಳ್ಳಾರಿಯ ಐದು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಹಂಪಿ ಉತ್ಸವ ಬೇಕೆ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಸರ್ಕಾರದ ಹಂತದಲ್ಲಿಯೇ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+