ನವೆಂಬರ್‌ನಲ್ಲಿ ಹಂಪಿ ಉತ್ಸವ : ಸಂತೋಷ್ ಲಾಡ್

ಬಳ್ಳಾರಿ, ಆಗಸ್ಟ್ 20 : 'ನವೆಂಬರ್ ತಿಂಗಳಿನಲ್ಲಿ ಹಂಪಿ ಉತ್ಸವವನ್ನು ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ' ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

'ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವವನ್ನು ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ಹಂಪಿ ಉತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವಕ್ಕೆ ಆಗಮಿಸಲಿದ್ದಾರೆ' ಎಂದು ಸಚಿವರು ತಿಳಿಸಿದರು.[ಹಂಪಿ ಉತ್ಸವದ ಸಂಭ್ರಮ ಇಮ್ಮಡಿಸಿದ ಸಾಹಸಿ ಕಲಾವಿದರು]

santosh lad

ಈ ಬಾರಿ ಉತ್ಸವ ನಡೆಯುವುದು ಖಚಿತ : ಸಂತೋಷ್ ಲಾಡ್ ಅವರು ಜಿಲ್ಲೆಯ ಕೈಗಾರಿಕೋದ್ಯಮಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಉತ್ಸವ ಆಚರಣೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದರು. 50ಕ್ಕೂ ಹೆಚ್ಚು ಕಲಾವಿದರೊಂದಿಗೂ ಮಾತುಕತೆ ನಡೆಸಿದ್ದರು.[ಹಂಪಿ- ವಿಜಯನಗರ ಬೇರೆ ಬೇರೆ ಹೇಗೆ?]

ಈ ವರ್ಷ ಮೈಸೂರು ದಸರಾವನ್ನು 11 ದಿನ ನಡೆಸುವ ನಿರ್ಧಾರವನ್ನು ಸರ್ಕಾರ ಕೈಗೊಂಡ ಬಳಿಕ ಹಂಪಿ ಉತ್ಸವಕ್ಕೆ ಹಸಿರು ನಿಶಾನೆ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಕಳೆದ ವರ್ಷ ಬರ ಮತ್ತು ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಉತ್ಸವವನ್ನು ಆಚರಣೆ ಮಾಡಿರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+