ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ?

|
Google Oneindia Kannada News

Recommended Video

ಹಂಪಿ ವಿರೂಪಾಕ್ಷ ದೇವಾಲಯದಲ್ಲೂ ವಸ್ತ್ರ ಸಂಹಿತೆ ಜಾರಿಗೆ ಚಿಂತನೆ | Oneindia Kannada

ಬಳ್ಳಾರಿ, ಅಕ್ಟೋಬರ್ 18 : ದೇಶದ ಹಲವು ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದೆ. ಬಳ್ಳಾರಿ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲು ಪ್ರಸ್ತಾವನೆ ಸಿದ್ಧವಾಗಿದೆ. ಸರ್ಕಾರದ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

ಹಂಪಿ ವಿರೂಪಾಕ್ಷ ದೇವಾಲಯದಲ್ಲಿ 6 ವರ್ಷಗಳ ಹಿಂದೆ ವಸ್ತ್ರ ಸಂಹಿತೆ ಜಾರಿಗೊಳಿಸುವ ಪ್ರಯತ್ನ ನಡೆದಿತ್ತು. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳು ಬಿಳಿ ಶಾಲನ್ನು ನೀಡಲಾಗುತ್ತಿತ್ತು. ಆದರೆ, ಅದು ಕೆಲವೇ ದಿನಗಳಲ್ಲಿ ನಿಂತು ಹೋಗಿತ್ತು.

ರಾಜ್ಯದ ಮೂರನೇ ಹುಲಿ ಸಫಾರಿ ಕೇಂದ್ರ ಹಂಪಿಯಲ್ಲಿರಾಜ್ಯದ ಮೂರನೇ ಹುಲಿ ಸಫಾರಿ ಕೇಂದ್ರ ಹಂಪಿಯಲ್ಲಿ

ಈಗ ದೇವಸ್ಥಾನದ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿದೆ. ಅದಕ್ಕಾಗಿ ತಾಲೂಕು ಅಧಿಕಾರಿಗಳ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಸರ್ಕಾರ ಒಪ್ಪಿಗೆ ನೀಡಿದರೆ ಶೀಘ್ರವೇ ವಸ್ತ್ರ ಸಂಹಿತೆ ವಿರೂಪಾಕ್ಷ ದೇವಾಲಯದಲ್ಲಿ ಜಾರಿಗೆ ಬರಲಿದೆ.

ಬಳ್ಳಾರಿಯಲ್ಲಿ ಲೋಟಸ್ ಮಹಲ್ ಮಾದರಿ ಜಿಲ್ಲಾಡಳಿತ ಭವನ ನಿರ್ಮಾಣಬಳ್ಳಾರಿಯಲ್ಲಿ ಲೋಟಸ್ ಮಹಲ್ ಮಾದರಿ ಜಿಲ್ಲಾಡಳಿತ ಭವನ ನಿರ್ಮಾಣ

ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಸಾಮಾನ್ಯ ದಿನಗಳಲ್ಲಿ 2 ಸಾವಿರ ಭಕ್ತರು ಪ್ರತಿದಿನ ಭೇಟಿ ನೀಡುತ್ತಾರೆ. ಸರ್ಕಾರಿ ರಜೆ, ವಿಶೇಷ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಿರುತ್ತದೆ. ವಸ್ತ್ರ ಸಂಹಿತೆ ಜಾರಿಗೆ ತರಲು ಸರ್ಕಾರ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು....

ಹಂಪಿಯಲ್ಲಿ ಕಾಣಿಸಿಕೊಂಡಿದೆ ಅಪರೂಪದ ಹಳದಿಕಾಲಿನ ಹಸಿರು ಪಾರಿವಾಳಹಂಪಿಯಲ್ಲಿ ಕಾಣಿಸಿಕೊಂಡಿದೆ ಅಪರೂಪದ ಹಳದಿಕಾಲಿನ ಹಸಿರು ಪಾರಿವಾಳ

ವಸ್ತ್ರ ಸಂಹಿತೆ ಜಾರಿಗೆ

ವಸ್ತ್ರ ಸಂಹಿತೆ ಜಾರಿಗೆ

ದೇವಾಲಯಕ್ಕೆ ಹಲವು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಆದರೆ, ಕೆಲವು ಭಕ್ತಾದಿಗಳು ಕಡಿಮೆ ಬಟ್ಟೆ ತೊಟ್ಟುಕೊಂಡು ಆಗಮಿಸುತ್ತಿದ್ದಾರೆ. ಆದ್ದರಿಂದ, ಸ್ಥಳೀಯರು ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಬಯಸಿದ್ದು, ದೇವಾಲಯದ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಬಯಸಿದೆ. ಜಿಲ್ಲಾಡಳಿತಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ

ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ

ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವ ಕುರಿತು ಅಸಿಸ್ಟೆಂಟ್ ಕಮೀಷನರ್ ಅವರು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಿದ್ದಾರೆ. ವಸ್ತ್ರ ಸಂಹಿತೆ ಜಾರಿಗೆ ತರಲು ಸರ್ಕಾರದ ಒಪ್ಪಿಗೆ ಬೇಕಾಗಿದೆ.

ಹೇಗಿರಲಿದೆ ವಸ್ತ್ರ ಸಂಹಿತೆ?

ಹೇಗಿರಲಿದೆ ವಸ್ತ್ರ ಸಂಹಿತೆ?

ವಸ್ತ್ರ ಸಂಹಿತೆ ಜಾರಿಗೆ ಬಂದರೆ ಪುರುಷರು ಪಂಚೆ, ಕುರ್ತಾ, ಶರ್ಟ ಧರಿಸಬಹುದಾಗಿದೆ. ಮಹಿಳೆಯರು ಸ್ಲಿವ್ ಲೆಸ್ ಬಟ್ಟೆಗಳನ್ನು ತೊಡುವಂತಿಲ್ಲ. ಶಾರ್ಟ್‌ಗಳನ್ನು ತೊಡುವಂತಿಲ್ಲ. ಜೀನ್ಸ್ ಪ್ಯಾಂಟ್ ಧರಿಸುವ ಮಹಿಳೆಯರು ದೇವಾಲಯವನ್ನು ಪ್ರವೇಶಿಸಬಹುದಾಗಿದೆ. ಆದರೆ, ವಿದೇಶಿ ಭಕ್ತರು ಏನು ಮಾಡಬೇಕು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಹಿಂದೆಯೂ ಪ್ರಯತ್ನ ನಡೆದಿತ್ತು

ಹಿಂದೆಯೂ ಪ್ರಯತ್ನ ನಡೆದಿತ್ತು

ದೇವಾಲಯದಲ್ಲಿ ಹಿಂದೆಯೂ ವಸ್ತ್ರ ಸಂಹಿತೆ ಜಾರಿಗೆ ತರುವ ಪ್ರಯತ್ನ ನಡೆದಿತ್ತು. ಆರು ವರ್ಷಗಳ ಹಿಂದೆ ವಸ್ತ್ರ ಸಂಹಿತೆ ಜಾರಿಗೆ ತರಲಾಗಿತ್ತು. ಆದರೆ, ಕೆಲವೇ ದಿನಗಳಲ್ಲಿ ಅದು ಸ್ಥಗಿತಗೊಂಡಿತ್ತು.

English summary
Hampi Virupaksha temple may joining the list of places of worship where devotees will have to follow a dress code. Temple administration sought the Karnataka government nod to implement dress code.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X