ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ಸೇರ್ಪಡೆ : ಕಂದಾಯ ಇಲಾಖೆ

By Mahesh
|
Google Oneindia Kannada News

ಹರಪನಹಳ್ಳಿ, ಮಾರ್ಚ್ 23: ದಾವಣಗೆರೆ ಜಿಲ್ಲೆಯಿಂದ ಹರಪನಹಳ್ಳಿ ತಾಲ್ಲೂಕನ್ನು ಪುನಃ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದ್ದು ಎಲ್ಲರಿಗೂ ತಿಳಿದಿದೆ. ಈ ಕುರಿತಂತೆ ಈಗ ಅಧಿಕೃತವಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಧೀನಕಾರ್ಯದರ್ಶಿ ಸಿ. ಪುಟ್ಟನಂಜಯ್ಯ ಬಳ್ಳಾರಿ ಜಿಲ್ಲೆ ಸೇರ್ಪಡೆಗೆ ಆದೇಶ ಹೊರಡಿಸಿದ್ದಾರೆ.

ಭಾರತೀಯ ಸಂವಿಧಾನಕ್ಕೆ ತರಲಾದ ತಿದ್ದುಪಡಿಯ ಅನುಚ್ಛೇದ 371ಜೆ ಸೇರ್ಪಡೆಯೊಂದಿಗೆ ಹೈದ್ರಾಬಾದ್ ಕರ್ನಾಟಕ
ಪ್ರದೇಶ ವ್ಯಾಪ್ತಿಯಲ್ಲಿ ಬರುವಂಥ ಬೀದರ್, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳು ಅನುಚ್ಛೇದ 371ಜೆ ನಂತೆ ವಿಶೇಷ ಸ್ಥಾನಮಾನ ಹೊಂದಿದ್ದು, ಈ ಜಿಲ್ಲೆಗಳ ಆಡಳಿತ ವ್ಯಾಪ್ತಿಯಲ್ಲಿ ಬರುವಂಥ ತಾಲ್ಲೂಕು, ಹೋಬಳಿ ಮತ್ತು ಗ್ರಾಮಗಳು ಅನುಚ್ಚೇದ 371ಜೆ ಯ ಸವಲತ್ತುಗಳಿಗೆ ಅರ್ಹತೆ ಹೊಂದಿರುತ್ತದೆ.

Harapanahalli

ಈ ಹಿಂದೆ ಬಳ್ಳಾರಿ ಜಿಲ್ಲೆಯ ಕಂದಾಯ ವ್ಯಾಪ್ತಿಗೆ ಒಳಪಟ್ಟಿದ್ದ ಹರಪನಹಳ್ಳಿ ತಾಲ್ಲೂಕನ್ನ ಜಿಲ್ಲೆಗಳ ಪುನರ್ ವಿಂಗಡಣೆ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಕಂದಾಯ ವ್ಯಾಪ್ತಿಯಲ್ಲಿ ತರಲಾಗಿರುತ್ತದೆ.

ತಂದೆ ಕಾಲದಲ್ಲಿ ದಾವಣಗೆರೆಗೆ, ಮಗನ ಆಡಳಿತದಲ್ಲಿ ಬಳ್ಳಾರಿ ಜಿಲ್ಲೆಗೆ!ತಂದೆ ಕಾಲದಲ್ಲಿ ದಾವಣಗೆರೆಗೆ, ಮಗನ ಆಡಳಿತದಲ್ಲಿ ಬಳ್ಳಾರಿ ಜಿಲ್ಲೆಗೆ!

ಆದರೆ, ಹರಪನಹಳ್ಳಿ ತಾಲ್ಲೂಕು ಬಹಳ ಹಿಂದುಳಿದ ತಾಲ್ಲೂಕು ಎಂದು ಸದರಿ ತಾಲ್ಲೂಕನ್ನು ಈ ಹಿಂದೆ ಇದ್ದಂತೆ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಸೇರಿಸಿ, ಅನುಚ್ಛೇದ 371ಜೆ ಸೌಲಭ್ಯಗಳನ್ನು ಸದರಿ ತಾಲ್ಲೂಕಿಗೂ ವಿಸ್ತರಿಸುವಂತೆ ಹಲವು ಮನವಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಹರಪನಹಳ್ಳಿ ತಾಲ್ಲೂಕನ್ನು ಈ ಹಿಂದೆ ಇದ್ದಂತೆ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಡಿಯಲ್ಲಿ ತರಲು ಸರ್ಕಾರವು ತೀರ್ಮಾನಿಸಿದೆ.

ಪ್ರಸ್ತಾವನೆಯನ್ನು ಕೂಲಂಕುಶವಾಗಿ ಪರಿಶೀಲಿಸಿ, ಅದರಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿರುವ ಹರಪನಹಳ್ಳಿ ತಾಲ್ಲೂಕನ್ನು ದಾವಣಗೆರೆ ಜಿಲ್ಲೆಯಿಂದ ತೆಗೆದು ಈ ಹಿಂದೆ ಇದ್ದಂತೆ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ತರಲು ಆದೇಶಿಸಲಾಗಿದೆ ಎಂದು ಅವರು ಸುತ್ತೋಲೆಯಲ್ಲಿ ಹೇಳಿದ್ದಾರೆ.

ಈ ಆದೇಶದ ಪ್ರತಿಗಳನ್ನು ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಕಲಬುರುಗಿ ಪ್ರಾದೇಶಿಕ ಆಯುಕ್ತರಿಗೆ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯ್ತಿ ಕಚೇರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿಕೊಡಲಾಗಿದೆ.

English summary
Karnataka Government Revenue department officially declared that Harapanaalli is included to Ballari district. Harapanahalli taluk stands third in the list of most backward taluks according to the D.M. Nanjundappa report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X