ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಜರಾತ್ ನಿಂದ ಬಂದಿದ್ದ ಹರಪನಹಳ್ಳಿ ವ್ಯಕ್ತಿಯಲ್ಲಿ ಕೊರೊನಾ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಮೇ 16: ಬಳ್ಳಾರಿ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬಳ್ಳಾರಿಯ ಹರಪನಹಳ್ಳಿಯ 46 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

Recommended Video

Muthappa Rai ಅಪರೂಪದ ಚಿತ್ರಗಳು | unseen photos | Oneindia Kannada

ಲಾಕ್ ಡೌನ್ ಸಡಿಲಿಕೆ ನಂತರ ಗುಜರಾತ್ ನ ಅಹಮದಾಬಾದ್ ನಿಂದ ಕೆಲವೇ ದಿನಗಳ ಹಿಂದೆ ಹರಪನಹಳ್ಳಿಗೆ ಈ ವ್ಯಕ್ತಿ ಬಂದಿದ್ದರು. ಅಂತರ ರಾಜ್ಯ ಗಡಿಭಾಗದ ಚೆಕ್‌ಪೋಸ್ಟ್‌ನಲ್ಲಿ ಕೊರೊನಾ ಸೋಂಕಿನ ತಪಾಸಣೆ ನಡೆಸಿ, ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿ ಆ ವ್ಯಕ್ತಿಯನ್ನು ಜಿಂದಾಲ್ ಒಪಿಜೆ ಸೆಂಟರ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

Harapanahalli Person Tested Corona Positive Today

ಬಳ್ಳಾರಿ ಮತ್ತು ಹೊಸಪೇಟೆಯಲ್ಲಿರೋ ವಲಸೆ ಕಾರ್ಮಿಕರಿಗೆ ಬಿಗ್ ಶಾಕ್ಬಳ್ಳಾರಿ ಮತ್ತು ಹೊಸಪೇಟೆಯಲ್ಲಿರೋ ವಲಸೆ ಕಾರ್ಮಿಕರಿಗೆ ಬಿಗ್ ಶಾಕ್

ಇಂದು ಪರೀಕ್ಷಾ ವರದಿ ಬಂದಿದ್ದು, ಇವರಿಗೆ ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ 19 ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಎಲ್ ಜನಾರ್ದನ್ ತಿಳಿಸಿದ್ದಾರೆ. ಸದ್ಯಕ್ಕೆ ಸೋಂಕಿತ ವ್ಯಕ್ತಿಯ ಟ್ರಾವಲ್ ಹಿಸ್ಟರಿಯನ್ನು ಕಲೆಹಾಕಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, 13 ಮಂದಿಯು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ಸ್ಪಷ್ಟನೆ ನೀಡಿದ್ದಾರೆ.

English summary
Harapanahalli person who came from ahmedabad before 3 days tested corona positive today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X