ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ: ಸಚಿವ ಆನಂದ್ ಸಿಂಗ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಡಿಸೆಂಬರ್ 29: ರಾಜ್ಯದ ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ 11ನೇ ಹುಲಿ ಸಂರಕ್ಷಣಾ ಪ್ರತಿಷ್ಠಾನ ಆಡಳಿತ ಮಂಡಳಿಯ ಸಭೆ ನಡೆಸಿದ ಅವರು, ಹುಲಿಗಳ ಸಂರಕ್ಷಣೆ ಜತೆಗೆ ಅವುಗಳ ಸಂರಕ್ಷಣಾ ಉದ್ಯಾನವನಗಳನ್ನು ತಂತ್ರಜ್ಞಾನಗಳ ಬಳಕೆ ಮೂಲಕ ಅಭಿವೃದ್ಧಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ವಿಡಿಯೋ; ಭದ್ರಾ ಅಭಯಾರಣ್ಯದಲ್ಲಿ ದರ್ಶನ ಕೊಟ್ಟ ಹುಲಿರಾಯವಿಡಿಯೋ; ಭದ್ರಾ ಅಭಯಾರಣ್ಯದಲ್ಲಿ ದರ್ಶನ ಕೊಟ್ಟ ಹುಲಿರಾಯ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ 100 ಚದರ ಅಡಿ ವ್ಯಾಪ್ತಿಯಲ್ಲಿ 12 ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಇಡೀ ದೇಶದಲ್ಲಿ ನಮ್ಮ ರಾಜ್ಯ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಹೀಗಾಗಿ ಹುಲಿಗಳ ಸಂರಕ್ಷಣೆ ಮಾಡುವ ಮೂಲಕ ಅವುಗಳ ಸಂತತಿಯನ್ನು ಉಳಿಸಬೇಕು ಎಂದರು.

High-Tech Touches To Tiger Conservation Parks: Anand Singh

ವಿಶೇಷವಾಗಿ ನಾಗರಹೊಳೆ ಹುಲಿ ಸಂರಕ್ಷಣಾ ಪ್ರತಿಷ್ಠಾನ ವತಿಯಿಂದ ಹುಲಿಗಳಿಂದ ಹಸುಗಳನ್ನು ರಕ್ಷಿಸಲು ಸುರಕ್ಷಿತವಾದ ಶೆಡ್ ನಿರ್ಮಾಣ ಮಾಡಲಾಗಿದೆ. ಇದನ್ನು ಯಾರೂ ದುರುಪಯೋಗ ಪಡಿಸಿಕೊಳ್ಳದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮೃಗಾಲಯಲಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗುವುದು. ಹುಲಿ ಸಂರಕ್ಷಣಾ ಪ್ರತಿಷ್ಠಾನ ನಿಧಿಯಿಂದ ಬಳಕೆ ಮಾಡಿ ಉಳಿದ ಅನುದಾನವನ್ನು ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುವುದು ಎಂದು ಹೇಳಿದರು.

ಹುಲಿ ಸಂರಕ್ಷಣಾ ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಪಾಡುವುದು ಕೂಡ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರತಿಷ್ಠಾನದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

Recommended Video

ಬೆಂಗಳೂರು: 'ಗ್ರಾ.ಪಂ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದೆ'-ಆರ್.ಆಶೋಕ್ | Oneindia Kannada

English summary
"The high-tech touches will be given to the tiger conservation parks of the state,' Forest Minister Anand Singh said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X