ಹೊಸಪೇಟೆ: ಭೀಕರ ಅಪಘಾತ ಪ್ರಕರಣ, ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಘೋಷಣೆ
ಬಳ್ಳಾರಿ ಜೂನ್, 30: ಬಳ್ಳಾರಿ ನಗರದಿಂದ ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ಆಗಮಿಸಿದ್ದ ಪ್ರವಾಸಿಗರ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಮೃತ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಸಫುರಾ ಬೀ (55), ಕೌಸರ್ (35), ಸಲೀಂ, ಯಾಸ್ಮೀನ್ (28), ಇಬ್ರಾಹಿಂ (28) ಹಾಗೂ ಜಹೀರ್ 4- ಇಬ್ರಾಹಿಂ ಹಾಗೂ ಆಟೋಚಾಲಕ ಮೃತಪಟ್ಟರವಾಗುದ್ದಾರೆ. ಇನ್ನು ಶಾನು (30), ಸಹಿರಾ (24), ನವಾಜ್ (3),
ತಾಹೀರ್ (6) ಗಾಯಳಾಗುಗಳಾಗಿದ್ದಾರೆ.
ಘಟನೆ ಬಗ್ಗೆ ಸಚಿವ ಬಿ.ನಾಗೇಂದ್ರ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಇದೇ ವೇಳೆ ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರು ಹಾಗೂ ಗಯಾಳುಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ನಡೆದಿದೆ. ಎರಡು ಆಟೋಗಳು ಮತ್ತು ಲಾರಿ ನಡುವೆ ಡಿಕ್ಕಿ ಅಪಘಾತ ಸಂಭವಿಸಿದ್ದು, ಒಂದು ಆಟೋ ಡಿಕ್ಕಿಯ ರಭಸಕ್ಕೆ ಹಲವು ಮೀಟರ್ ದೂರ ಹೋಗಿ ಬಿದ್ದಿದೆ. ಇನ್ನು ಈ ಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯಿಂದ ಹೊಸಪೇಟೆಗೆ ಹೊರಟಿತ್ತು. ಈ ವೇಳೆ ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಶಾಶಮ್ಮ ಎಂಬ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೊಂದು ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್‌ಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications