ಶೀಘ್ರದಲ್ಲೇ ಹರಿಹರ-ಕೊಟ್ಟೂರು ಮೂಲಕ ಬೆಂಗಳೂರು ರೈಲು ಸಂಚಾರ

ಬಳ್ಳಾರಿ, ಫೆಬ್ರವರಿ 10 : ಹೊಸಪೇಟೆ-ಬೆಂಗಳೂರು ರೈಲು ಹರಿಹರ-ಕೊಟ್ಟೂರು ಮೂಲಕ ಸಂಚಾರ ನಡೆಸಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಈ ಮಾರ್ಗದಲ್ಲಿ ಕೇವಲ ಗೂಡ್ಸ್ ರೈಲುಗಳು ಸಂಚಾರ ನಡೆಸುತ್ತಿದ್ದವು.

ಕೊಟ್ಟೂರು ನಾಗರೀಕ ಕ್ರಿಯಾ ಸಮಿತಿ ಕಾರ್ಯದರ್ಶಿ ಮದನ್ ಶಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಹೊಸಪೇಟೆ-ಬೆಂಗಳೂರು ರೈಲು ಹರಿಹರ-ಕೊಟ್ಟೂರು ಮಾರ್ಗವಾಗಿ ಮಾರ್ಚ್ 31ರಿಂದ ಸಂಚಾರ ನಡೆಸಲಿದೆ ಎಂದು ಹೇಳಿದ್ದಾರೆ.

ಸಮಿತಿಯ ಸದಸ್ಯರು ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಎ.ಕೆ.ಸಿನ್ಹಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಹರಿಹರ-ಕೊಟ್ಟೂರು ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದರು.

Hosapete-Harihar train from March 31

ಸುಮಾರು 600 ಕೋಟಿ ವೆಚ್ಚದಲ್ಲಿ ರೈಲು ಮಾರ್ಗ ನಿರ್ಮಾಣವಾಗಿದ್ದರೂ ಕೇವಲ ಗೂಡ್ಸ್ ರೈಲುಗಳು ಸಂಚಾರ ನಡೆಸುತ್ತಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ಜನರಿಗೆ ಉಪಯೋಗವಾಗಲಿದೆ ಎಂದು ಮನವಿ ಸಲ್ಲಿಸಲಾಗಿತ್ತು.

ಕೊಟ್ಟೂರು-ಹರಿಹರ ಮಾರ್ಗದಿಂದ ಹೈದರಾಬಾದ್ ಕರ್ನಾಟಕ ಭಾಗದ ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ಭಾಗದ ಜನರ ಬಹುದಿನ ಕನಸಾಗಿತ್ತು. 1995ರಲ್ಲಿ ಹರಿಹರ-ಕೊಟ್ಟೂರು ರೈಲ್ವೆ ಮಾರ್ಗದ ಕಾಮಗಾರಿ ಬೇಗ ಮುಗಿಸಲು ಮನವಿ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+