• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೊಸಪೇಟೆ; 11 ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು

By ವಿಜಯನಗರ ಪ್ರತಿನಿಧಿ
|

ವಿಜಯನಗರ, ಮಾರ್ಚ್ 30; ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ 11 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದಾಗಿ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಇತರ ವಿದ್ಯಾರ್ಥಿಗಳಿಗೂ ಆತಂಕ ಎದುರಾಗಿದೆ.

ಹೊಸಪೇಟೆ ತಾಲೂಕಿನದ್ಯಾಂತ 110ಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿಗಳು ಸಾರ್ವಜನಿಕ ಸಭೆ, ಮಂದಿರ, ಮಸೀದಿಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ. ಪ್ರತಿಭಟನೆ, ಮೆರವಣಿಗೆಗಳನ್ನು ನಿಷೇಧಿಸಲಾಗಿದೆ.

ಹೊಸಪೇಟೆ; ಗರ್ಭಿಣಿಯರಿಗೆ ಈಗ ಕೋವಿಡ್ ನೆಗೆಟಿವ್ ವರದಿ ಚಿಂತೆ

ಒಂದೇ ದಿನದಲ್ಲಿ ಹೊಸಪೇಟೆ ನಗರದ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ 11 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಇದುವರೆಗೂ ನಗರದ ಯಾವುದೇ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರಲಿಲ್ಲ.

ಹೊಸಪೇಟೆ: ಮತ್ತೆ 11 ರೈಲ್ವೆ ಸಿಬ್ಬಂದಿಗೆ ಕೊರೊನಾ ವೈರಸ್ ಪಾಸಿಟಿವ್!

 Hospet Pyara Medical College 11 Students Tested Positive For COVID

ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು ಹೇಗೆ? ಎಂದು ಆರೋಗ್ಯ ಇಲಾಖೆ ತಲೆಕೆಡಿಸಿಕೊಂಡಿದೆ. ಸೋಂಕು ತಗುಲಿದ ವಿದ್ಯಾರ್ಥಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವ ಕೆಲಸವನ್ನು ಇಲಾಖೆ ಮಾಡುತ್ತಿದೆ.

ಹೊಸಪೇಟೆ: ರೈಲ್ವೆ ಇಲಾಖೆಯ 18 ಸಿಬ್ಬಂದಿಗೆ ಕೊರೊನಾ ವೈರಸ್ ಪತ್ತೆ

ಸೋಂಕು ತಗುಲಿರುವ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ನಗರದ ವಿವಿಧ ಹಾಸ್ಟೆಲ್‌ಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಲಹೆ ನೀಡಲಾಗಿದೆ.

ಹೊಸಪೇಟೆ ನಗರದಲ್ಲಿ ಮಾರ್ಚ್ 9ರಂದು ರೈಲ್ವೆ ಇಲಾಖೆಯ 18 ಲೊಕೋ ಪೈಲೆಟ್‌ಗಳಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಚಪ್ಪಲಗಡ್ಡ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್‌ ಎಂದು ಘೋಷಣೆ ಮಾಡಲಾಗಿತ್ತು.

ತಾಲೂಕು ವೈದ್ಯಾಧಿಕಾರಿ ಭಾಸ್ಕರ ಅವರು ಈ ಕುರಿತು ಮಾತನಾಡಿದ್ದು, "ಈಗಾಗಲೇ ನಮ್ಮ ಇಲಾಖೆಯಿಂದ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಮುಂಜಾಗ್ರ ಕ್ರಮವಾಗಿ ನಗರದ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

English summary
Vijayanagara district Hospet taluk pyara medical college 11 students tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X